ಬೆಂಗಳೂರು: ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಮಾಡುವಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡಲಾಗಿದೆ ಎಂದು ಮಾಜಿ ಸಚಿವ ಆರ್. ರೋಷನ್ ಬೇಗ್ ಆಕ್ರೋಶ ಹೊರ ಹಾಕಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿàಮರಿಗೆ ಟಿಕೆಟ್ ನೀಡಿದರೆ ಗೆಲ್ಲುವ ಅಭ್ಯರ್ಥಿಗಳು ಇಲ್ಲ ಎಂಬ ಕುಂಟು ನೆಪ ಹೇಳಿ ಅವಕಾಶಗಳನ್ನು ತಪ್ಪಿಸಲಾಗುತ್ತಿದೆ. ಈ ಮೂಲಕ ಮುಸ್ಲಿಮರ ನಾಯಕತ್ವವನ್ನೇ ಅಂತ್ಯಗೊಳಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್‌ನಿಂದ ಈಗ ಸ್ಪರ್ಧಿಸಿರುವ 21 ಕ್ಷೇತ್ರಗಳಲ್ಲಿ ಎಲ್ಲ ಅಭ್ಯರ್ಥಿಗಳೂ ಗೆಲುವು ಸಾಧಿಸುತ್ತಾರೆಯೇ ? ಬೇರೆಯವರಿಗೆ ಇಲ್ಲದ ಮಾನದಂಡ ಮುಸ್ಲಿàಮರಿಗೆ ಮಾತ್ರ ಏಕೆ ? ಮುಸ್ಲಿಮರಿಗೆ ಆಗುತ್ತಿರುವ ಅನ್ಯಾಯಕ್ಕೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ನಾಯಕತ್ವದ ವೈಫಲ್ಯವೇ ಕಾರಣ ಎಂದು ದೂರಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇಕಡಾ 99 ರಷ್ಟು ಮುಸ್ಲಿಮರು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು. ಆದ್ದರಿಂದಲೇ 80 ಸ್ಥಾನ ಗೆಲ್ಲಲು ಸಾಧ್ಯವಾಯಿತು.ಇಲ್ಲದಿದ್ದರೆ 60 ಸ್ಥಾನ ಗಳಿಸುವುದು ಕಷ್ಟವಿತ್ತು. ಧಾರವಾಡದಲ್ಲಿ ಶಾಕೀರ್ ಸನದಿ ಹೆಸರು ಕೇಳಿದ 24 ಗಂಟೆಯಲ್ಲಿ ಅಭ್ಯರ್ಥಿಯನ್ನು ಬದಲಾಯಿಸಲಾಯಿತು. ಹಾಲಿ ಶಾಸಕರಿಗೆ ಟಿಕೆಟ್ ನೀಡುವುದಿಲ್ಲ ಎಂದು ಹೇಳಿ, ಈಶ್ವರ್ ಖಂಡ್ರೆ, ಕೃಷ್ಣ ಬೈರೇಗೌಡ ಅವರಿಗೆ ಟಿಕೆಟ್ ನೀಡಲಾಯಿತು ಎಂದರು.
ಮುಸ್ಲಿಮರನ್ನು ನಿರಂತರವಾಗಿ ನಿರ್ಲಕ್ಷ್ಯ ಮಾಡುತ್ತಿರುವುದನ್ನು ಗಮನಿಸಿದರೆ, ಮುಸ್ಲಿಂ ಮುಕ್ತ ಕಾಂಗ್ರೆಸ್ ಮಾಡುವ ಹುನ್ನಾರ ನಡೆಯುತ್ತಿದೆ ಎಂಬ ಅನುಮಾನ ಮೂಡುತ್ತದೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಮೈತ್ರಿ ಪಕ್ಷಗಳ ಸಮಾವೇಶದಲ್ಲಿಯೂ ಮುಸ್ಲಿ ನಾಯಕರಿಗೆ ಆದ್ಯತೆ ದೊರೆತಿಲ್ಲ. ಪಕ್ಷದಲ್ಲಿ ಮುಸ್ಲಿಮರನ್ನು ನಿರ್ಲಕ್ಷ್ಯ ಮಾಡುತ್ತಿರುವ ಬಗ್ಗೆ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ಕಾರ್ಯವೈಖರಿಯ ಬಗ್ಗೆ ರಾಹುಲ್ ಗಾಂಧಿಗೆ ಪತ್ರ ಬರೆದು ಮನವರಿಕೆ ಮಾಡಿಕೊಡುವುದಾಗಿ ತಿಳಿಸಿದರು.
ಇದೇ ವೇಳೆ, ಮುಸ್ಲಿಮರು ಕಾಂಗ್ರೆಸ್ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ ಎಂಬ ಭಾವನೆಯಿಂದ ಕಾಂಗ್ರೆಸ್ ನಾಯಕರು ಹೊರ ಬರಬೇಕು. ಮುಸ್ಲಿàಮರಲ್ಲಿಯೂ ರಾಜಕೀಯ ಪ್ರಜ್ಞೆ ಮೂಡುತ್ತಿದ್ದು, ತಮ್ಮ ಭವಿಷ್ಯಕ್ಕಾಗಿ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಇದೆ ಎಂದು ಎಚ್ಚರಿಕೆ ನೀಡಿದರು.