ಬೆಂಗಳೂರು: ಪ್ರತ್ಯೇಕ ಧರ್ಮದ ಹೋರಾಟಕ್ಕೆ ಪರೋಕ್ಷ ಬೆಂಬಲ ನೀಡಿದ್ದ ಸಿಎಂ ಸಿದ್ದರಾಮಯ್ಯ ಟಿಕೆಟ್ ಹಂಚಿಕೆಯಲ್ಲಿಯೂ ಲಿಂಗಾಯತ ನಾಯಕರಿಗೆ ನಿರೀಕ್ಷಿಸಿದಷ್ಟು ಟಿಕೆಟ್ ನೀಡುವ ಮೂಲಕ ಸಮಾಧಾನ ಪಡಿಸುವ ಪ್ರಯತ್ನ ಮಾಡಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಲಿಂಗಾಯತ ಸಮುದಾಯದವರಿಗೆ ಟಿಕೆಟ್ ನೀಡಲಾಗಿದೆ.
2013ರ ಚುನಾವಣೆಯಲ್ಲಿ 44 ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿತ್ತು. ಈ ಬಾರಿಯೂ ಅಷ್ಟೇ ಸಂಖ್ಯೆಯ ಲಿಂಗಾಯತ ಸಮುದಾಯದವರಿಗೆ ಟಿಕೆಟ್ ನೀಡಿದ್ದು, ಲಿಂಗಾಯತ ರೆಡ್ಡಿ ಸಮುದಾಯದವರು ಸೇರಿ ಸುಮಾರು 50 ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದೆ.
ಹಳೇ ಮೈಸೂರು ಭಾಗದಲ್ಲಿ ಕನಿಷ್ಠ ಹತ್ತು ಕ್ಷೇತ್ರದಲ್ಲಿ ಟಿಕೆಟ್ ನೀಡುವಂತೆ ಲಿಂಗಾಯತ ಮುಖಂಡರು ಮನವಿ ಮಾಡಿದ್ದರು. ತಿಪಟೂರಿನಲ್ಲಿ ಬಿ.ನಂಜಾಮರಿ, ಮಡಿಕೇರಿಯಲ್ಲಿ ಎಚ್.ಎಸ್.ಚಂದ್ರಮೌಳಿ ಹಾಗೂ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಗೀತಾ ಮಹದೇವ ಪ್ರಸಾದ್‌ಗೆ ಟಿಕೆಟ್ ನೀಡಲಾಗಿದೆ.
ಆದರೆ, ಬೆಂಗಳೂರಿನಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಕೋರಿದ್ದರಾದರೂ ಯಾವುದೇ ಕ್ಷೇತ್ರದಲ್ಲಿ
ಲಿಂಗಾಯತರಿಗೆ ಟಿಕೆಟ್ ನೀಡಲಾಗಿಲ್ಲ.