Advertisement

ವಿಧಾನಸಭೆ ಚುನಾವಣೆಗೆ ಟಿಕೆಟ್‌ ಆಕಾಂಕ್ಷಿ: ಹೆಬ್ಟಾಳಕರ

11:05 AM Mar 19, 2017 | |

ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಬೆಳಗಾವಿ ಗ್ರಾಮೀಣ ಕ್ಷೇತ್ರದ ಆಕಾಂಕ್ಷಿ. ಟಿಕೆಟ್‌ ಸಿಗಬಹುದೆಂಬ ವಿಶ್ವಾಸದಿಂದ ಕೇತ್ರದ ಜನರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ.

Advertisement

ಟಿಕೆಟ್‌ ನೀಡದಿದ್ದರೂ ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡುತ್ತೇನೆಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳಕರ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ನಡೆದಿವೆ. ಅಲ್ಲಿನ ಜನರ ಜತೆ ಸತತ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next