Advertisement
ಕೋರಮಂಗಲ ಐದನೇ ಬ್ಲಾಕ್‌ನಿಂದ ಆರಂಭವಾದ ಪಾದಯಾತ್ರೆ ಬಿಟಿಎಂ ಲೇಔಟ್‌ನಲ್ಲಿ ಸಮಾರೋಪಗೊಂಡಿತು. ಈ ಸಂದರ್ಭದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ನಡುವೆ ನೂಕಾಟ, ತಳ್ಳಾಟ ನಡೆಯಿತು. ಬಿಜೆಪಿ ರಾಜ್ಯ ಕಾರ್ಯದರ್ಶಿ ಜಯದೇವ ಮತ್ತು ಸಹ ವಕ್ತಾರ ವಿವೇಕ ಸುಬ್ಟಾರೆಡ್ಡಿ ಬೆಂಬಲಿಗರ ನಡುವೆ ನಡೆದ ಕಿತ್ತಾಟ ಕೇಂದ್ರ ಸಚಿವರನ್ನೇ ಇಕ್ಕಟ್ಟಿಗೆ ಸಿಲುಕಿಸಿತ್ತು.
Related Articles
Advertisement
ರಾಜ್ಯ ಬಿಜೆಪಿ ಕಾರ್ಯದರ್ಶಿ ಜಯದೇವ, ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸುದರ್ಶನ್, ವಿಧಾನ ಪರಿಷತ್ ಸದಸ್ಯೆ ತಾರಾ ಅನೂರಾಧ ಮತ್ತಿತರರಿದ್ದರು. ಜಯನಗರ ಹಾಗೂ ಗೋವಿಂದರಾಜು ನಗರ ವಿಧಾನಸಭಾ ಕ್ಷೇತ್ರದಲ್ಲೂ ಬಿಜೆಪಿಯಿಂದ ಪಾದಯಾತ್ರೆ ನಡೆಸಿದರು. ಕೇಂದ್ರ ಸಚಿವ ಅನಂತ್ ಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಮಾಜಿ ಸಚಿವ ವಿ.ಸೋಮಣ್ಣ ಮೊದಲಾದವರು ಭಾಗವಹಿಸಿದ್ದರಯ.
ಕಾಂಗ್ರೆಸ್ ಪ್ರಜಾತಂತ್ರಕ್ಕೆ ವಿರುದ್ಧವಾಗಿದೆ: ಕಾಂಗ್ರೆಸ್ ಪ್ರಜಾತಂತ್ರಕ್ಕೆ ವಿರುದ್ಧವಾದ ಸಂಸ್ಕೃತಿ ಅನುಸರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ, ಎನ್‌ಡಿಎಗೆ ಸದನದ ಒಳಗೆ ಮತ್ತು ಹೊರಗೆ ಎಲ್ಲರ ಬೆಂಬಲ ಇದೆ. ಕಾಂಗ್ರೆಸ್ ಮತ್ತು ವಿರೋಧಪಕ್ಷದವರು ಮಂಡಿಸಲಿರುವ ಅವಿಶ್ವಾಸ ಗೊತ್ತುವಳಿ ಎದುರಿಸಲು ಸಿದ್ಧರಿದ್ದೇವೆ.
ಬಿಜೆಪಿ ಪೂರ್ಣ ಬಹುಮತ ಪಡೆದು ಆಡಳಿತಕ್ಕೆ ಬಂದಿದೆ. ದೇಶದ ಜನರ ಆಶೀರ್ವಾದ ಹಾಗೂ ಪಾರ್ಲಿಮೆಂಟ್ ಬೆಂಬಲ ಇದೆ ಎಂದು ಸಚಿವ ಅನಂತ್ ಕುಮಾರ್ ಹೇಳಿದರು. ಮಿತ್ರಪಕ್ಷ ತೆಲಗು ದೇಶಂ ಪಾರ್ಟಿ ಆಂಧ್ರಕ್ಕೆ ವಿಶೇಷ ಪ್ಯಾಕೇಜ್ ನೀಡಬೇಕೆಂಬ ವಿಷಯದಲ್ಲಿ ತನ್ನ ನಿರ್ಧಾರ ತೆಗೆದುಕೊಂಡಿದೆ. ಮೋದಿ ಸರ್ಕಾರ ಆಂಧ್ರದ ಸಮಗ್ರ ಅಭಿವೃದ್ಧಿಗೆ 24 ಸಾವಿರ ಕೋಟಿ ರೂ. ನೀಡಿದೆ.
ಅಮರಾತಿಯ ಪುನರ್ ನಿರ್ಮಾಣ, ಆಂಧ್ರದ ಅಣೆಕಟ್ಟು ಹಾಗೂ ರಸ್ತೆಗಳ ನಿರ್ಮಾಣಕ್ಕೂ ಅನುದಾನ ನೀಡಿದೆ. ಆಂಧ್ರದಲ್ಲಿ ವೈಎಸ್‌ಆರ್ ಕಾಂಗ್ರಸ್ ಹಾಗೂ ಬೇರೆ ಪಕ್ಷಗಳ ಆಂದೋಲನದಿಂದ ಧೃತಿಗೆಟ್ಟು ಈ ನಿರ್ಧಾರ ತೆಗೆದುಕೊಂಡಿದೆ. ತೆಲಗು ದೇಶಂ ಪಾರ್ಟಿ ಎನ್‌ಡಿಎಯಿಂದ ಬೇರಾದರೂ ಆಂಧ್ರದ ಅಭಿವೃದ್ಧಿಯಲ್ಲಿ ಮೋದಿ ಸರ್ಕಾರ ಇದ್ದೇ ಇರುತ್ತದೆ ಎಂದರು.
ಮನೆಮನೆಗೆ ಕಾಂಗ್ರೆಸ್ ಎಂಬ ಅಭಿಯಾನವನ್ನು ಕಾಂಗ್ರೆಸ್ ಪಕ್ಷ ನಡೆಸುತ್ತಿದೆಯಾದರೂ ಅಲ್ಲಿ ನಾಯಕರ ಮಕ್ಕಳಿಗಷ್ಟೇ ಟಿಕೆಟ್ ನೀಡಲಾಗುತ್ತದೆ. ಪ್ರತಿ ಜಿಲ್ಲೆಯಲ್ಲೂ ಟಿಕೆಟ್ ಹಂಚಲು ಲಾಬಿ ಗುಂಪುಗಳನ್ನು ಸಿಎಂ ಸಿದ್ದರಾಮಯ್ಯ ರೂಪಿಸಿದ್ದಾರೆ.-ಅನಂತ್‌ಕುಮಾರ್, ಕೇಂದ್ರ ಸಚಿವ