ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಹುಲಿ ದಾಳಿ ನಡೆಸಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ತಾಲೂಕಿನ ಪಂಡರವಳ್ಳಿಯಲ್ಲಿ ನಡೆದಿದೆ.
ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಮಹಿಳೆ ಮೇಲೆ ಹುಲಿ ಎರಗಿದ್ದು, ಕಾರ್ಮಿಕರು ಕೂಗಾಡುತ್ತಿದ್ದಂತೆ ಹುಲಿ ಪರಾರಿಯಾಗಿದೆ. ಆಕೆಯ ಹಣೆ ಮತ್ತು ಮುಖಕ್ಕೆ ಗಂಭೀರ ಗಾಯವಾಗಿದೆ. ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
8 ವರ್ಷದ ಹಿಂದೆ ಪಂಡರವಳ್ಳಿಯಲ್ಲಿ ಹುಲಿಗೆ ಮಹಿಳೆ ಬಲಿಯಾಗಿದ್ದರು. ಮತ್ತೆ ಹುಲಿ ದಾಳಿಯಾಗಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.