Advertisement

ಹುಲಿ ದಾಳಿಗೆ ಓರ್ವ ವ್ಯಕ್ತಿ ಮೃತ್ಯು; ಅರಣ್ಯ ಸಿಬ್ಬಂದಿಗಳ ಮೇಲೆ ಗ್ರಾಮಸ್ಥರಿಂದ ಹಲ್ಲೆ

12:43 PM Jun 29, 2023 | Team Udayavani |

ಮುಂಬಯಿ: ಹುಲಿ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಕೋಪಗೊಂಡ ಗ್ರಾಮಸ್ಥರ ಗುಂಪೊಂದು ಅರಣ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಮಹಾರಾಷ್ಟ್ರದ ಬಾಂದ್ರಾ ಜಿಲ್ಲೆಯಲ್ಲಿ ನಡೆದಿದೆ.

Advertisement

ದಾಳಿಯಲ್ಲಿ ಗಾಯಗೊಂಡಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮತ್ತು ಇಬ್ಬರು ಅರಣ್ಯ ಸಿಬ್ಬಂದಿಗಳು ನಾಗ್ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಾಂದ್ರಾದ ಪಯೋನಿ ತಹಸಿಲ್‌ನ ಖಟ್ಖೇಡಾ ಗ್ರಾಮದಲ್ಲಿ ಬುಧವಾರ ಬೆಳಗ್ಗೆ 52 ವರ್ಷದ ಈಶ್ವರ್ ಮೋಟ್‌ಘರೆ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿ, ವ್ಯಕ್ತಿಯನ್ನು ಕೊಂದು ಹಾಕಿತ್ತು.

ಘಟನೆ ಬಳಿಕ ಅರಣ್ಯಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳು ಹುಲಿ ಹಿಡಿಯಲು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕೋಪಗೊಂಡ ಗ್ರಾಮಸ್ಥರು ಎಸಿಎಫ್ ಮತ್ತು ಇಬ್ಬರು ಅರಣ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ಅರಣ್ಯ ಇಲಾಖೆಯ ಇತರೆ ಸಿಬ್ಬಂದಿಗಳು ಹುಲಿಯನ್ನು ಸೆರೆಹಿಡಿದು, ನಾಗಪುರದ ಗೊರೆವಾಡ ರಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಹುಲಿ ದಾಳಿಗೆ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) 30 ಸಾವಿರ ಪರಿಹಾರ ಮತ್ತು 9.70 ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next