Advertisement

Tiger Attack: ಬಿ.ಹೊಸಹಳ್ಳಿಯಲ್ಲಿ ಹುಲಿ ದಾಳಿ: ಮೂರು ಕರುಗಳು ಸಾವು

07:49 PM Jan 07, 2024 | Team Udayavani |

ಕೊಟ್ಟಿಗೆಹಾರ: ಬಣಕಲ್ ಹೋಬಳಿಯ ಬಿ.ಹೊಸಳ್ಳಿ ದುಗ್ಗಿನಮಕ್ಕಿ ಗ್ರಾಮದಲ್ಲಿ ಹುಲಿ ದಾಳಿ ಮಾಡಿ ಮೂರು ಕರುಗಳು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

Advertisement

ಬಿ.ಹೊಸಳ್ಳಿ ಗ್ರಾಮದ ಅಶೋಕಗೌಡ ಮತ್ತು ರುದ್ರಪ್ಪಗೌಡ ಎಂಬುವವರಿಗೆ‌ ಸೇರಿದ ಮೂರು ಕರುಗಳನ್ನು ಹುಲಿ ದಾಳಿ ಮಾಡಿದೆ. ಘಟನಾಸ್ಥಳಕ್ಕೆ ಉಪ ವಲಯ ಅರಣ್ಯ ಅಧಿಕಾರಿ ಉಮೇಶ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಹುಲಿ ಸ್ಥಳಾಂತರಕ್ಕೆ ಸಾರ್ವಜನಿಕರ ಒತ್ತಾಯ:
ಬಿ.ಹೊಸಹಳ್ಳಿಯಲ್ಲಿ ಸುಮಾರು ವರ್ಷಗಳಿಂದ ಈ ಭಾಗದ ಭಾರತೀಬೈಲ್, ಬಿ.ಹೊಸಳ್ಳಿ, ಹೊಕ್ಕಳ್ಳಿ, ಹೆಗ್ಗುಡ್ಲು ಭಾಗದಲ್ಲಿ ನೂರಕ್ಕೂ ಅಧಿಕ ದನಗಳು ಹುಲಿಯ ದಾಳಿಯಿಂದ ಸತ್ತಿದ್ದರೂ ಕೂಡ ಅರಣ್ಯ ಇಲಾಖೆ ಹುಲಿ ಸ್ಥಳಾಂತರಕ್ಕೆ ಮುಂದಾಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಹಲವು ಬಾರಿ ಹುಲಿ ಸ್ಥಳಾಂತರಕ್ಕೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರೂ ಹುಲಿ ಸೆರೆ ಹಿಡಿಯಲು ಮೀನಾಮೇಷ ಎಣಿಸುವಂತಾಗಿದೆ. ಈ ಭಾಗದಲ್ಲಿ ಕೂಲಿ ಕಾರ್ಮಿಕರು, ಶಾಲಾ ಮಕ್ಕಳು ಹೆಚ್ಚು ತಿರುಗುತ್ತಿದ್ದು ಮನುಷ್ಯರ ಮೇಲೆ ಎರಗುವ ಸಾಧ್ಯತೆಗಳು ಹೆಚ್ಚಿವೆ.

ಹುಲಿಯ ದಾಳಿಯಿಂದ ಕೂಲಿ ಕಾರ್ಮಿಕರು ಶಾಲಾ ಮಕ್ಕಳು ಕೂಡ ರಸ್ತೆಯಲ್ಲಿ ಓಡಾಡಲು ಭಯ ಪಡುವಂತಾಗಿದೆ.ನಿರಂತರ ಗ್ರಾಮಗಳಲ್ಲಿ ದಾಳಿ ಮಾಡುತ್ತಿರುವ ಹುಲಿಯನ್ನು ಸ್ಥಳಾಂತರಿಸಬೇಕು ಎಂದು ಗ್ರಾಮಸ್ಥ ಚಂದನ್ ಗೌಡ ಒತ್ತಾಯಿಸಿದ್ದಾರೆ.

Advertisement

ಹುಲಿ ದಾಳಿಗೆ ಬಿ.ಹೊಸಳ್ಳಿ ಭಾಗದ ಮೂರು ಕರುಗಳು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಬಂದಿದೆ.ಇದರ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಪರಿಹಾರಕ್ಕಾಗಿ ಸೂಕ್ತ ಕ್ರಮಕ್ಕೆ ಆಗ್ರಹಿಸಲಾಗಿದೆ
-ಉಮೇಶ್ , ಉಪ ವಲಯ ಅರಣ್ಯಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next