Advertisement
ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ತೋಟದ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಹುಲಿ ದಾಳಿ ಮಾಡಿದೆ. ಬಾಲಕ ರಂಗಸ್ವಾಮಿ (8) ಸ್ಥಳದಲ್ಲೇ ಮೃತಪಟ್ಟಿದ್ದು, ಆತನ ತಾತ ಕೆಂಚ (52) ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಥಮ ಚಿಕಿತ್ಸೆಯ ಅನಂತರ ಅವರನ್ನು ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
16 ದಿನಗಳಲ್ಲಿ ಮೂವರು ವ್ಯಕ್ತಿಗಳು ಮತ್ತು 12 ಹಸುಗಳು ಹುಲಿ ದಾಳಿಗೆ ಬಲಿಯಾಗಿವೆ. ಗ್ರಾಮದಲ್ಲಿ ಆತಂಕ ನೆಲೆಸಿದ್ದು, ಗ್ರಾಮಸ್ಥರು ಹಾಗೂ ವಿವಿಧ ಸಂಘ, ಸಂಸ್ಥೆಗಳು ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆಯ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಶ್ರೀಮಂಗಲದ ಟಿ. ಶೆಟ್ಟಿಗೇರಿ ವ್ಯಾಪ್ತಿಯಲ್ಲಿ ಫೆ. 21ರಂದು ವಿದ್ಯಾರ್ಥಿ ಎರವರ ಅಯ್ಯಪ್ಪ (16), ಫೆ. 22ರಂದು ಕಾರ್ಮಿಕ ಮಹಿಳೆ ಚಿಣ್ಣಿ (60) ಅವರ ಮೇಲೆ ಹುಲಿ ದಾಳಿ ಮಾಡಿ ಕೊಂದುಹಾಕಿತ್ತು.
Related Articles
ಮೂವರನ್ನು ಬಲಿ ಪಡೆದಿರುವ ಹುಲಿಯ ಸೆರೆ ಅಥವಾ ಕೊನೆಯ ಪ್ರಯತ್ನವಾಗಿ ಗುಂಡಿಕ್ಕುವಂತೆ ಆದೇಶಿಸಿ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶಿಸಿದ್ದಾರೆ.
Advertisement