Advertisement

Tiger Claw: ಹುಲಿ ಉಗುರು ಪ್ರಕರಣ… ಯಾರೇ ಇರಲಿ ಕಾನೂನಿನಂತೆ ಕ್ರಮ: ಈಶ್ವರ ಖಂಡ್ರೆ

12:23 PM Oct 25, 2023 | Team Udayavani |

ಕಲಬುರಗಿ: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಸೇರಿದಂತೆ ಇತರೆ ವಸ್ತುಗಳ ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಈಗಾಗಲೇ ಕೆಲವು ಬಂಧನಗಳಾಗಿವೆ. ಈ ಎಲ್ಲ ಪ್ರಕರಣಗಳಲ್ಲಿ ನೆಲದ ಕಾನೂನು ಬಳಕೆ ಮಾಡಲಾಗುವುದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

Advertisement

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಪ್ರಾಣಿಗಳನ್ನು ಹತ್ಯೆ ಮಾಡಿ ಅವುಗಳ ಹಲ್ಲು, ಚರ್ಮ, ಕೊಂಬು ಹಾಗೂ ಇತರೆ ಅಂಗಗಳ ಬಳಕೆ ಮಾಡಿರುವುದು ಬಯಲಾಗಿ ಶಿಕ್ಷೆಗೆ ಒಳಗಾಗಿರುವುದು ಗೊತ್ತೆ ಇರುವ ವಿಚಾರ. ಈಗ ರಾಜ್ಯದಲ್ಲೂ ನಡೆಯುತ್ತಿರುವ ವಿದ್ಯಾಮಾನಗಳಲ್ಲಿ ಹುಲಿ ಉಗುರು ಬಳಕೆ ಮಾಡಿ ಜನರಲ್ಲಿ ಆಕರ್ಷಣೆ ಉಂಟು ಮಡುತ್ತಿರುವ ಹಿನ್ನೆಲೆಯಲ್ಲಿ ಕೆಲವು ಬಂಧನಗಳಾಗಿವೆ. ಇನ್ನಷ್ಟು ಬಂಧನದ ಸಾಧ್ಯತೆಗಳನ್ನು ಅವರು ನಿರಾಕರಣೆ ಮಾಡಲಿಲ್ಲ. ಬದಲಿಗೆ ನೆಲದ ಕಾನೂನಿನಂತೆ ಕ್ರಮ ಜರುಗುಸಲಾಗುವುದು ಎಂದರು.

ಯಾರೇ ಇರಲಿ ಕಾನೂನಿನಂತೆ ಕ್ರಮ
ಕನ್ನಡ ಚಲನಚಿತ್ರ ನಟ ದರ್ಶನ ಹಾಗೂ ವಿನಯ ಗುರೂಜಿ ಅವರು ಸಾರ್ವಜನಿಕವಾಗಿ ಹುಲಿ ಉಗುರು ತೊಟ್ಟು ಆಕ್ಷೇಪಾರ್ಹವಾಗಿ ನಡೆದು ಕೊಂಡಿದ್ದಾರೆ ಎನ್ನುವ ನಿಟ್ಟಿನಲ್ಲಿ ಕ್ರಮ ಜರುಗಿಸಲು ಅಧಿಕಾರಿಗಳು ಬದ್ಧರಾಗಿದ್ದಾರೆ. ಸಾರ್ವಜನಿಕರು ಈ ನಿಟ್ಟಿನಲ್ಲಿ ದೂರು ನೀಡಿದರೆ, ನೆಲದ ಕಾನೂನಿನ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದರು.

ಪ್ರಾಣಿಜನ್ಯ ವಸ್ತು ಗಳ ಬಳಕೆ ಸಂಗ್ರಹ, ಸಾಗಾಟ ಮೊದಲಿನಿಂದಲೂ ನಿಷೇಧ ಮಾಡಲಾಗಿದೆ. ಈ ಅಪರಾಧಕ್ಕೆ ಏಳು ವರ್ಷ ದ ಶಿಕ್ಷೆಯೂ ಇದೆ ಎಂದರು. ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಶರಣಕುಮಾರ ಮೋದಿ ಹಾಗೂ ಇದ್ದರು.

ಇದನ್ನೂ ಓದಿ: Maisa Abdel Hadi: ಪ್ರಚೋದನಕಾರಿ ಪೋಸ್ಟ್: ಅರಬ್​-ಇಸ್ರೇಲಿ ನಟಿ ಮೈಸಾ ಅಬ್ದೆಲ್​ ಹದಿ ಬಂಧನ

Advertisement
Advertisement

Udayavani is now on Telegram. Click here to join our channel and stay updated with the latest news.

Next