Advertisement

Tiger claw pendant; ಕಾನೂನು ದೊಡ್ಡದು… ; ಆಕ್ರೋಶ ಹೊರ ಹಾಕಿದ ಜಗ್ಗೇಶ್

12:20 AM Oct 26, 2023 | Team Udayavani |

ಬೆಂಗಳೂರು: ಹುಲಿ ಉಗುರು ಧರಿಸಿರುವ ವಿಡಿಯೋ ತುಣುಕು ವೈರಲ್ ಆದ ಬೆನ್ನಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳು ಮನೆಗೆ ಆಗಮಿಸಿ ವಶಪಡಿಸಿಕೊಂಡ ಬೆನ್ನಲ್ಲೇ ರಾಜ್ಯಸಭಾ ಸದಸ್ಯ, ನವರಸ ನಾಯಕ ಜಗ್ಗೇಶ್ ಸಾಮಾಜಿಕ ತಾಣದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

Advertisement

”ಕಾನೂನು ದೊಡ್ಡದು.ಅಧಿಕಾರಿಗಳು ಕೇಳಿದವಸ್ತು ಒಪ್ಪಿಸಲಾಗಿದೆ!. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ! ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು,ದೇಶದ್ರೋಹಿಗಳು,ಸಮಾಜ ಘಾತಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ನೆನ್ನೆಯಿಂದ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ.ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದಿಲ್ಲಾ!ಪಾಚ್ಕೊಳಿ.” ಎಂದು ಪೋಸ್ಟ್ ಮಾಡಿದ್ದಾರೆ.

ಇನ್ನೊಂದು ಪೋಸ್ಟ್ ನಲ್ಲಿ ”ಒಂದು ವಿಷಯ ಅದ್ಭುತವಾಗಿ ಅರಿತೆ ಪ್ರೀತಿಸುವವರು 1000ಜನ ಇದ್ದರು ವಿಷಯವಿಲ್ಲದೆ ದ್ವೇಷ ಮಾಡುವ 100ಜನರು ಇದ್ದೆ ಇರುತ್ತಾರೆ!. But remember one thingಒಳ್ಳೆಗುಣನಡತೆ ಇದ್ದಾಗ ಕೊಲ್ಲೋಕೆ ಸಾವಿರ ಮಂದಿ ಬಂದರು ಕಾಯಲು ಒಬ್ಬ ಬರುತ್ತಾನೆ ಅವನೆ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆಯದು ಮಾಡಿ. ಅನ್ಯರಿಗೆ ಕೆಡುಕುಬಯಸಿ ಬಾಳಿದರೆ ನಾಶ!” ಎಂದು ಆಕ್ರೋಶಭರಿತ ಪೋಸ್ಟ್ ಮಾಡಿದ್ದಾರೆ.

ಜಗ್ಗೇಶ್ ಅವರು ಸುದ್ದಿ ಮಾಧ್ಯಮವೊಂದರ ಸಂದರ್ಶನದ ವೇಳೆ ತಾನು ಧರಿಸಿದ್ದ ಸರದಲ್ಲಿ ಪೋಣಿಸಿದ್ದ ಹುಲಿ ಉಗುರು ಒರಿಜಿನಲ್ , ಇದನ್ನು ನಾನು 20 ವರ್ಷದವನಿದ್ದಾಗ ನನ್ನ ತಾಯಿ ನನಗೆ ಕೊಟ್ಟಿದ್ದರು ಎಂದು ಹೇಳಿದ್ದರು. ಇದನ್ನೇ ಮುಂದಿಟ್ಟು ಹಲವರು ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದರು. ಈಗಾಗಲೇ  ಜಗ್ಗೇಶ್ ಅವರ ಪತ್ನಿ ಅಧಿಕಾರಿಗಳ ಕೈಗೆ ಒಪ್ಪಿಸಿದ್ದಾರೆ. ಅದನ್ನು ಲ್ಯಾಬ್ ನಲ್ಲಿ ಪರೀಕ್ಷೆಗೊಳಪಡಿಸಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next