Advertisement

Madhya Pradesh; 4 ವರ್ಷಗಳಲ್ಲಿ ಹುಲಿಗಳ ಸಂಖ್ಯೆ 785 ಕ್ಕೆ ಏರಿದೆ: ಶಿವರಾಜ್ ಸಿಂಗ್ ಚೌಹಾಣ್

04:59 PM Jul 29, 2023 | Team Udayavani |

ಭೋಪಾಲ್: ಮಧ್ಯಪ್ರದೇಶದಲ್ಲಿ 2018 ರಲ್ಲಿ 526 ಇದ್ದ ಹುಲಿಗಳ ಸಂಖ್ಯೆ 2022 ರಲ್ಲಿ 785 ಕ್ಕೆ ಏರಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಅಂತಾರಾಷ್ಟ್ರೀಯ ಹುಲಿ ದಿನದಂದು ರಾಜ್ಯದ ಜನತೆಗೆ ಶನಿವಾರ ಶುಭಾಶಯ ಕೋರಿದ್ದಾರೆ.

Advertisement

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, ಮಧ್ಯಪ್ರದೇಶವು ದೇಶದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿದೆ, ಕರ್ನಾಟಕ (563) ,ನಂತರದ ಸ್ಥಾನದಲ್ಲಿದೆ ಉತ್ತರಾಖಂಡ (560).

ಸಮೀಕ್ಷೆಯ ಪ್ರಕಾರ ಮಧ್ಯಪ್ರದೇಶದ ಅರಣ್ಯಗಳು ನಾಲ್ಕು ವರ್ಷಗಳ ಅವಧಿಯಲ್ಲಿ 259 ಹುಲಿಗಳನ್ನು ಸೇರಿಸಿದೆ.

ನಮ್ಮ ರಾಜ್ಯದ ಜನರ ಸಹಕಾರ ಮತ್ತು ಅರಣ್ಯ ಇಲಾಖೆಯ ಅವಿರತ ಪ್ರಯತ್ನದ ಫಲವಾಗಿ ನಾಲ್ಕು ವರ್ಷಗಳಲ್ಲಿ ನಮ್ಮ ರಾಜ್ಯದಲ್ಲಿ ಹುಲಿಗಳ ಸಂಖ್ಯೆ 526 ರಿಂದ 785 ಕ್ಕೆ ಏರಿರುವುದು ಸಂತಸದ ವಿಷಯ ಎಂದು ಚೌಹಾಣ್ ಹೇಳಿದರು.

ಈ ಯಶಸ್ಸಿಗೆ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ ಅವರು, ಅಂತಾರಾಷ್ಟ್ರೀಯ ಹುಲಿ ದಿನಾಚರಣೆಯಂದು ನಾವೆಲ್ಲರೂ ಒಟ್ಟಾಗಿ ಮುಂದಿನ ಪೀಳಿಗೆಗೆ ಪ್ರಕೃತಿಯನ್ನು ಸಂರಕ್ಷಿಸುವ ಪ್ರತಿಜ್ಞೆ ಮಾಡೋಣ ಎಂದರು.

Advertisement


ಮಧ್ಯಪ್ರದೇಶವು ಆರು ಹುಲಿ ಸಂರಕ್ಷಿತ ಪ್ರದೇಶಗಳನ್ನು ಹೊಂದಿದೆ: ಕನ್ಹಾ, ಬಾಂಧವಗಢ, ಪನ್ನಾ, ಪೆಂಚ್, ಸತ್ಪುರ ಮತ್ತು ಸಂಜಯ್-ದುಬ್ರಿ ಹುಲಿ ಸಂರಕ್ಷಿತ ಪ್ರದೇಶವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next