ಹುಣಸೂರು: ತಾಲೂಕಿನ ಬೀರತಮ್ನಹಳ್ಳಿಯ ಜಮೀನಿನಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
Advertisement
ತಾಲೂಕಿನ ಹನಗೋಡು ಹೋಬಳಿಯ ಬೀರತಮ್ಮನಹಳ್ಳಿ ಮೀಸಲು ಅರಣ್ಯದಂಚಿನಲ್ಲಿರುವ ಚಂದ್ರನಾಯಕ ಎಂಬವರ ಜಮೀನಿನಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿದೆ.
ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ಹುಣಸೂರು ವಲಯದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.