Advertisement

ಬಂಡೀಪುರ : ಹುಲಿಗಳ ಕಾದಾಟದಲ್ಲಿ ಗಂಡು ಹುಲಿ ಸಾವು

06:16 PM Apr 10, 2022 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ) : ಸುಮಾರು 6ರಿಂದ 7 ವರ್ಷದ ಗಂಡು ಹುಲಿ ಮತ್ತೊಂದು ಹುಲಿಯ ಜೊತೆ ಕಾದಾಟ ನಡೆಸಿ ಸಾವನ್ನಪ್ಪಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವನ್ಯಜೀವಿ ವಲಯದ ಕುರುಬರಹುಂಡಿ ಶಾಖೆ-2, ಬರಗಿ ಗಸ್ತಿನ ಆರದೇವನಕಟ್ಟೆ ಅರಣ್ಯ ಪ್ರದೇಶದ ಬಳಿ ನಡೆದಿದೆ.

Advertisement

ಬರಗಿ ಗಸ್ತಿನ ಆರದೇವನಕಟ್ಟೆ ಅರಣ್ಯ ಪ್ರದೇಶದ ಬಳಿ ಅರಣ್ಯ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಹುಲಿಯ ಮೃತ ದೇಹ ಪತ್ತೆಯಾಗಿದೆ. ಮೃತ ಹುಲಿಯ ಎಲ್ಲಾ ಉಗುರುಗಳು, ಹಲ್ಲುಗಳು ಹಾಗೂ ಇತರೆ ಅಂಗಾಗಗಳು ಸುರಕ್ಷಿತವಾಗಿದೆ. ಸ್ಥಳಕ್ಕೆ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್‍ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ. ಪರಮೇಶ್, ಇಲಾಖೆಯ ಪಶು ವೈದ್ಯಾಧಿಕಾರಿ ಡಾ. ವಾಸೀಂ ಮಿರ್ಜಾ, ಗೌರವಾನ್ವಿತ ವನ್ಯಜೀವಿ ಪರಿಪಾಲಕ ಎಂ.ಕೆ.ನಂಜುಂಡೇರಾಜೇ ಅರಸ್, ಆರ್. ರಘುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅರಣ್ಯ ಇಲಾಖೆ ಪಶು ವೈದ್ಯಾಧಿಕಾರಿ ಡಾ.ವಾಸೀಂ ಮಿರ್ಜಾ ಅವರಿಂದ ಹುಲಿಯ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ನಂತರ ದೇಹವನ್ನು ಸುಡಲಾಯಿತು.

ಇದನ್ನೂ ಓದಿ : ರೈತರ ಆದಾಯ ದ್ವಿಗುಣಗೊಳಿಸಲು ಕೇಂದ್ರ ಸರಕಾರದ ನೂರಾರು ಯೋಜನೆ- ಈರಣ್ಣ ಕಡಾಡಿ

Advertisement

Udayavani is now on Telegram. Click here to join our channel and stay updated with the latest news.

Next