ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಹುಲಿ ಉಪಟಳ ಮತ್ತೆ ಮಿತಿ ಮೀರಿದೆ. ಕಳೆದ 2 ದಿನಗಳಲ್ಲಿ ನಾಲ್ಕು ಜಾನುವಾರುಗಳನ್ನು ಕೊಂದು ಹಾಕಿದೆ.
ವೀರಾಜಪೇಟೆ ತಾಲೂಕಿನ ಅರ್ಜಿ ಗ್ರಾಮದಲ್ಲಿ ಮಂಗಳವಾರ ಪಿ. ಲವ ಅವರಿಗೆ ಸೇರಿದ ಹಸುವನ್ನು ಬಲಿ ಪಡೆದಿದೆ. ಅರಣ್ಯಾಧಿಕಾರಿಗಳು ಹಾಗೂ ಪಶುವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಿರಂತರ ದಾಳಿ ಮಾಡುತ್ತಿರುವ ಹುಲಿ ಜಾಡನ್ನು ಪತ್ತೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗ್ರಾಮದಲ್ಲಿ ಆತಂಕದ ವಾತಾವರಣವಿದ್ದು, ತತ್‌ಕ್ಷಣ ಹುಲಿ ಯನ್ನು ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇತ್ತೀಚೆಗಷ್ಟೇ ಬಿಟ್ಟಂಗಾಲ ಸಮೀಪ 2ನೇ ರುದ್ರಗುಪ್ಪೆ ಗ್ರಾಮದಲ್ಲಿ ಎ. ಧನು ಅವರಿಗೆ ಸೇರಿದ ಮೂರು ಕರುಗಳನ್ನು ಹುಲಿ ಕೊಂದು ಹಾಕಿತ್ತು.