Advertisement
ತಾಲೂಕಿನ ಹನಗೋಡು ಹೋಬಳಿಯ ಅಬ್ಬೂರು ಗ್ರಾಮದ ತಿಮ್ಮೇಗೌಡರಿಗೆ ಸೇರಿದ ಹಸು ಹಾಗೂ ಮೇಕೆಯಾಗಿದ್ದು, ಗುರುವಾರದಂದು ಶೆಟ್ಟಹಳ್ಳಿಯ ಅರಣ್ಯದಂಚಿನಲ್ಲಿರುವ ತಮ್ಮ ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಹಸುವನ್ನು ಕೊಂದು ಹಾಕಿದೆಯಲ್ಲದೆ ಪಕ್ಕದಲ್ಲೇ ಮೇಯುತ್ತಿದ್ದ ಮೇಕೆಯನ್ನು ಹೊತ್ತೊಯ್ದಿದೆ.
ವಾರದ ಹಿಂದಷ್ಟೇ ಗೌಡಿಕೆರೆ ಗ್ರಾಮದ ಶೇಖರ್ ರವರಿಗೆ ಸೇರಿದ ಹಸುವಿನ ಮೇಲೆ ದಾಳಿ ನಡೆಸಿ ಸಾಯಿಸಿತ್ತು. ಅಲ್ಲದೆ ಮೂರು ದಿನಗಳ ಹಿಂದೆ ಸಮೀಪದ ಬೀರತಮ್ಮನಹಳ್ಳಿಯಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿತ್ತು. ಘಟನ ಸ್ಥಳಕ್ಕೆ ಹುಣಸೂರು ವಲಯದ ಡಿ.ಆರ್.ಎಫ್.ಓ.ಸಿದ್ದರಾಜು ಸ್ಥಳಕ್ಕೆ ಭೇಟಿ ನೀಡಿ ಮಹಜರ್ ನಡೆಸಿ ಇಲಾಖೆಯಿಂದ ಬರುವ ಪರಿಹಾರ ನೀಡಲು ಕ್ರಮವಹಿಸಲಾಗುವುದೆಂದು ತಿಳಿಸಿದರು.
Related Articles
Advertisement
ಹುಲಿ ಸೆರೆಗೆ ಆಗ್ರಹತಕ್ಷಣ ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಕ್ರಮವಹಿಸಬೇಕೆಂದು ನೇರಳಕುಪ್ಪೆ ಮಹದೇವ್ ಹಾಗೂ ಗ್ರಾ.ಪಂ.ಸದಸ್ಯ ಕುಮಾರ್ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.