ಮಂಗಳೂರು: ಸುಪ್ರೀಂಕೋರ್ಟ್ ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪನ್ನು ನೀಡಿರುವ ಹಿನ್ನಲೆಯಲ್ಲಿ ಮಂಗಳೂರು ನಗರಾದ್ಯಂತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಕಮಿಷನರ್ ಗಸ್ತು ತಿರುಗಿದ್ದಾರೆ. ತೆರೆದ ವಾಹನದಲ್ಲಿ ಭದ್ರತಾ ಪಡೆಯೊಂದಿಗೆ ಕಮಿಷನರ್ ಹರ್ಷ ಅವರು ಗಸ್ತು ತಿರುಗುವ ಮೂಲಕ ಸಾರ್ವಜನಿಕರಲ್ಲಿ ಭದ್ರತೆಯ ಭಾವನೆಯನ್ನು ಮೂಡಿಸಿದರು.
ಕೋವು ಸೂಕ್ಷ್ಮ ಪ್ರದೇಶವಾಗಿರುವ ಉಳ್ಳಾಲಕ್ಕೆ ಪೊಲೀಸ್ ಕಮೀಷನರ್ ಮತ್ತು ಡಿಸಿಪಿ ಲಕ್ಷ್ಮಿ ಗಣೇಶ್ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ ಹಾಗೂ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಉಳ್ಳಾಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಮೊಗವೀರಪಟ್ನ, ಕೋಟೆಪುರ, ಕೋಡಿ, ಸೋಮೇಶ್ವರ, ತೊಕ್ಕೊಟ್ಟು ಒಳಪೇಟೆ, ಚೆಕ್ ಪೋಸ್ಟ್, ಕೆ.ಸಿ.ರೋಡ್, ತಲಪಾಡಿ, ಮಾಡೂರು, ಮದನಿನಗರ, ಕಲ್ಲಾಪು ಚೆಕ್ ಪಾಯಿಂಟ್ ಸೇರಿದಂತೆ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಮತ್ತು ಪೊಲೀಸರು ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Related Articles
60 ಪೊಲೀಸರು, 80 ಕೆ.ಎಸ್.ಆರ್.ಪಿ., ಸಿ.ಎ.ಆರ್. ಪೊಲೀಸರನ್ನು ಭದ್ರತಾ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ. ಎಲ್ಲೆಡೆ ಪರಿಸ್ಥಿತಿ ಶಾಂತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.