Advertisement

ಗಡಿಗಳಲ್ಲಿ ಕಟ್ಟೆಚ್ಚರ ವಹಿಸಿ

05:16 PM May 03, 2020 | Suhan S |

ಚಿಕ್ಕಬಳ್ಳಾಪುರ:  ಕೋವಿಡ್ 19 ವೈರಸ್‌ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗದಿಂದ ಬರುವ ಜನರ ಮೇಲೆ ಹೆಚ್ಚು ನಿಗಾ ವಹಿಸುವುದರ ಜೊತೆಗೆ ಕಟ್ಟೆಚ್ಚೆರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ಲತಾ ಜಿಲ್ಲೆಯ ನೋಡಲ್‌ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಕೋವಿಡ್‌-19 ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಿಂದ ಹೊರಗೆ ಹೋಗುವಂತಹ ಕಾರ್ಮಿಕರು ಹಾಗೂ ಜಿಲ್ಲೆಗೆ ಬರುವಂತಹ ಕಾರ್ಮಿಕರು ಸೇವಾ ಸಿಂಧು ವೆಬ್‌ ಸೈಟ್‌ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಕಾರ್ಮಿಕರನ್ನು ಅವರ ಸ್ಥಳಗಳಿಗೆ ಹಿಂತಿರುಗುಲು ಜಿಲ್ಲಾಡಳಿತ ಅನುಮತಿ ನೀಡಲಾಗುತ್ತದೆ. ಕಾರ್ಮಿಕರು ತೆರಳಲು ಸರ್ಕಾರಿ ಬಸ್‌ ಅಥವಾ ರೈಲಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದರು.

ಕೇಂದ್ರ ಸರ್ಕಾರದ ಆದೇಶದಂತೆ ವಲಸೆ ಕಾರ್ಮಿಕರನ್ನು ತಮ್ಮ ವಾಸಸ್ಥಳಗಳಿಗೆ ಹೋಗಲು ಅವಕಾಶ ನೀಡಲಾಗಿದೆ. ಅಂತಾರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಜಿಲ್ಲೆಗೆ ಬರುವಂತಹ ಪ್ರತಿಯೊಬ್ಬ ಕಾರ್ಮಿಕರನ್ನು ತಪಾಸಣೆಗೆ ಒಳಪಡಿಸಲಾಗುವುದು ಹಾಗೂ 14 ದಿನಗಳ ಹೋಂ ಕ್ವಾರಂಟೈನ್‌ ಮಾಡಿ ನಿಗಾ ವಹಿಸಲಾಗುತ್ತದೆ ಎಂದರು.

ಸಭೆಯಲ್ಲಿ ಜಿಲ್ಲಾ ಎಸ್ಪಿ ಮಿಥುನ್‌ ಕುಮಾರ್‌, ಅಪರ ಜಿಲ್ಲಾಧಿಕಾರಿ ಆರತಿ, ಚಿಕ್ಕಬಳ್ಳಾಪುರ ಕೋವಿಡ್‌-19 ವಿಶೇಷ ನೋಡಲ್‌ ಅಧಿಕಾರಿ ಡಾ.ಎನ್‌.ಭಾಸ್ಕರ್‌, ಜಿಲ್ಲಾ ಆರೋಗ್ಯಾಧಿಕಾರಿ ಬಿ.ಎಂ.ಯೋಗೇಶ್‌ ಗೌಡ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next