Advertisement
ಕಳೆದ ವರ್ಷ ರಾಜಧಾನಿಯಲ್ಲಿ ಐಸಿಸ್ ಪರವಾಗಿ ಕೆಲಸ ಮಾಡುತ್ತಿದ್ದ ಹಲವು ಮಂದಿ ಉಗ್ರರ ಬಂಧನವಾಗಿದೆ. ಜತೆಗೆ, ಆರೋಪಿಗಳು ನಗರ ಹಾಗೂ ಹೊರವಲಯ ಭಾಗಗಳಲ್ಲಿ ಐಸಿಸ್ ಪರವಾಗಿ ತರಬೇತಿ ಶಿಬಿರಗಳನ್ನು ನಡೆಸುತ್ತಿದ್ದರು. ಜತೆಗೆ, ಸಂಘಟನೆ ಸಧೃಡಪಡಿಸಲಾಗುತ್ತಿತ್ತು ಎಂಬ ವಿಚಾರ ತನಿಖೆಯಲ್ಲಿ ಬಯಲಾಗಿತ್ತು.
Related Articles
Advertisement
ರಾಜ್ಯದಲ್ಲಿ ಉಗ್ರಚಟುವಟಿಕೆಗಳು, ನಕ್ಸಲ್ ಚಟುವಟಿಕೆಗಳನ್ನು ಪತ್ತೆಹಚ್ಚಲೆಂದೇ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಆಂತರಿಕ ಭದ್ರತಾ ದಳ( ಐಎಸ್‌ಡಿ) ಕೂಡ ಅಲರ್ಟ್ ಆಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕೇಂದ್ರ ಗುಪ್ತಚರ ಮಾಹಿತಿ ಮೇರೆಗೆ ರಾಜ್ಯದಲ್ಲಿ ಉಗ್ರ ಚಟುವಟಿಕೆಗಳ ಮೇಲೆ ನಿಗಾ ಇಟ್ಟಿದೆ.
ಅಷ್ಟೇ ಅಲ್ಲದೆ ಕರಾವಣಿ ತೀರ ಪ್ರದೇಶದ ಮೇಲೂ ಹದ್ದಿನ ಕಣ್ಣಿಟ್ಟಿದ್ದು ಇತ್ತೀಚೆಗೆ ಐಎಸ್‌ಡಿಯ ಹಿರಿಯ ಅಧಿಕಾರಿಗಳು ಕಾರವಾರ, ಉತ್ತರ ಕನ್ನಡ, ಮಂಗಳೂರು, ಕುಮಟಾ ಸೇರಿ ಹಲವು ಕಡಲ ತೀರ ಪ್ರದೇಶಗಳಿಗೆ ಭೇಟಿ ನೀಡಿದ್ದು. ಸಾಗರ ರಕ್ಷಣಾ ದಳದ ಸಿಬ್ಬಂದಿ ಜತೆ ಭದ್ರತಾ ಕ್ರಮಗಳ ಜತೆ ಚರ್ಚೆ ನಡೆಸಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳ ನಡೆಯದಂತೆ ಯಾವೆಲ್ಲಾ ಕ್ರಮಗಳನ್ನು ಅನುಸರಿಬೇಕು ಎಂಬುದರ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
” ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಟ್ಟುನಿಟ್ಟಾಗಿ ಪಾಲನೆ ಆಗುತ್ತಿದೆ. ಇಲಾಖೆಗೆ ಸಂಬಂಧಪಟ್ಟಂತೆ ಆಗಾಗ್ಗೆ ಸೂಚನೆಗಳನ್ನು ನೀಡಲಾಗುತ್ತಿರುತ್ತದೆ. ಅದೇ ರೀತಿ ಗಣರಾಜ್ಯೋತ್ಸವಕ್ಕೆ ಸಂಬಂಧಪಟ್ಟಂತೆ ಕಟ್ಟುನಿಟ್ಟಿನ ಕಾನೂನು ಸುವ್ಯವಸ್ಥೆ ಪಾಲನೆ ಮಾಡಲಾಗುತ್ತದೆ.”– ಸಿ.ಎಚ್ ಪ್ರತಾಪ್ ರೆಡ್ಡಿ, ಎಡಿಜಿಪಿ, ಕಾನೂನು ಸುವ್ಯವಸ್ಥೆ ವಿಭಾಗ