Advertisement

ಚೆಕ್‌ಪೋಸ್ಟ್‌ ತಪಾಸಣೆ ಬಿಗಿಗೊಳಿಸಿ

07:10 PM May 05, 2020 | Suhan S |

ಶಿವಮೊಗ್ಗ: ನೆರೆಯ ದಾವಣಗೆರೆ ಜಿಲ್ಲೆಯಲ್ಲಿ  ಕೋವಿಡ್ 19 ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗಿರುವ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ ತಪಾಸಣೆ ಬಿಗಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಅವರು ಬೆಳಗ್ಗೆ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಮಾಸ್ಕ್ ಧರಿಸದಿದ್ದರೆ ದಂಡ: ಮಾಸ್ಕ್ ಧರಿಸುವುದನ್ನು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದ್ದು, ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಉಲ್ಲಂಘನೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೂ.200 ಹಾಗೂ ಇತರ ಕಡೆಗಳಲ್ಲಿ ರೂ. 100 ದಂಡ ವಿಧಿ ಸಲಾಗುವುದು. ಸಾಮಾಜಿಕ ಅಂತರ ಅಂದರೆ ಸಾರ್ವಜನಿಕ ಸ್ಥಳಗಳಲ್ಲಿ ವ್ಯಕ್ತಿಗಳ ನಡುವೆ ಕನಿಷ್ಟ 1ಮೀಟರ್‌ ಅಂತರ ಪಾಲಿಸಬೇಕು. ಈ ಕುರಿತು ವ್ಯಾಪಕವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next