Advertisement

ನಾಳೆಯಿಂದ ಮತ್ತಷ್ಟು ಬಿಗಿ: ಸಚಿವ

05:25 AM Jul 02, 2020 | Lakshmi GovindaRaj |

ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಡೆಯಲು ಜಿಲ್ಲಾಡಳಿತ ಜು.3ರಿಂದ ಸಂಜೆ 6 ಗಂಟೆಯಿಂದ ವ್ಯಾಪಾರ ವಹಿವಾಟು, ಸಾರ್ವಜನಿಕರ ಸಂಚಾರ ನಿರ್ಬಂಧಿಸಲು ನಿರ್ಧರಿಸಿದೆ.  ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ ನೇತೃತ್ವದಲ್ಲಿ ನಡೆದ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳ ಲಾಯಿತು.

Advertisement

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ  ಸೋಮಶೇಖರ್‌, ಜಿಲ್ಲೆಯಲ್ಲಿ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಗಳ ಸೂಚನೆ ಮೇರೆಗೆ ಸೋಂಕು ತಡೆಯಲು ಬಿಗಿ ಕ್ರಮ ಕೈಗೊಳ್ಳುತ್ತಿದೆ. ಕರ್ಫ್ಯೂ ವೇಳೆ ವಾಹನ ಸವಾರರು ನಿಯಮ ಉಲ್ಲಂ ಸಿದರೆ  ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಸಮುದಾಯಕ್ಕೆ ಹರಡಿಲ್ಲ: ಅಂತರರಾಜ್ಯ, ಜಿಲ್ಲೆಯ ಸಂಪರ್ಕ ನಿಷೇಧಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ. ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದಿಂದ ರಾಜ್ಯಕ್ಕೆ ಬಂದವರಿಂದ ಸೋಂಕು ಬಂದಿದೆ. ಬೆಂಗಳೂರಿನಿಂದಲೂ ಆಗಮಿಸಿದ್ದವರನ್ನು ಕ್ವಾರಂಟೈನ್‌ ಮಾಡಿದ ಮೇಲೆ ಪಾಸಿಟಿವ್‌ ದೃಢವಾಗಿದೆ.

ಈವರೆಗೆ ಹೊರಗಿನಿಂದ ಬಂದು ಕ್ವಾರಂಟೈನ್‌ ನಲ್ಲಿದ್ದವರಿಗೆ ಸೋಂಕು ದೃಢವಾಗಿದೆಯೇ ಹೊರತು ಮೈಸೂರಿನಲ್ಲಿ ಸಮುದಾಯಕ್ಕೆ ಹರಡಿಲ್ಲ. ಕೋವಿಡ್‌  ಆಸ್ಪತ್ರೆಯಲ್ಲಿ ಈಗ ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕರ್ನಾಟಕ ರಾಜ್ಯ ಮುಕ್ತ ವಿವಿ ಕಟ್ಟಡ ಅಲ್ಲದೇ ಖಾಸಗಿ ಆಸ್ಪತ್ರೆಗಳಲ್ಲೂ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಸಂಸದ ಪ್ರತಾಪ್‌ ಸಿಂಹ, ಶಾಸಕರಾದ ರಾಮದಾಸ್‌, ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌, ನಗರ ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ, ಎಸ್ಪಿ ರಿಶ್ಯಂತ್‌ ಇತರ ಅಧಿಕಾರಿಗಳಿದ್ದರು.

Advertisement

22 ಜಿಲ್ಲೆಗಳಲ್ಲಿ ಪ್ರೋತ್ಸಾಹ ಧನ ವಿತರಣೆ: ರಾಜ್ಯದ 22 ಜಿಲ್ಲೆಗಳಲ್ಲಿ ಪ್ರೋತ್ಸಾಹಧನ ವಿತರಣೆಗೆ ಚಾಲನೆ ನೀಡಿದ್ದೇನೆ. ಸಹಕಾರ ಇಲಾಖೆಯಿಂದ ಆಶಾ ಕಾರ್ಯಕರ್ತೆ ಯರಿಗೆ ನೀಡುತ್ತಿರುವ ಪ್ರೋತ್ಸಾಹಧನ ಕೇವಲ ನಗರ ಪ್ರದೇಶವರಿಗೆ  ಸೀಮಿತವಾಗಿಲ್ಲ. ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ವಿತರಿಸಲಾಗುತ್ತಿದೆ. ಇದರಲ್ಲಿ ತಾರತಮ್ಯವಿಲ್ಲ. ಈವರೆಗೆ 18,500 ಮಂದಿ ಆಶಾ ಕಾರ್ಯಕರ್ತೆ ಯರಿಗೆ ವಿತರಿಸಲಾಗಿದೆ. ಉಳಿದಿರುವು ದನ್ನು ಸ್ಥಳೀಯ ಜನಪ್ರತಿನಿಧಿಗಳ ಮೂಲಕ ವಿತರಿಸಲಾಗುತ್ತದೆ ಎಂದು ಸಚಿವ ಸೋಮಶೇಖರ್‌ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಮುಂದೆ ಹಾಸಿಗೆಗಳ ಕೊರತೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ವೈದ್ಯರು, ಸಿಬ್ಬಂದಿ ಕೊರತೆ ನೀಗಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ  ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಸಮಾಲೋಚಿಸಿದ್ದೇನೆ. ವೈದ್ಯರ ವೇತನ ಹೆಚ್ಚಳ ಸೇರಿ ಇನ್ನಿತರ ಸವಲತ್ತು ನೀಡಿ ನೇಮಕ ಮಾಡಿಕೊಳ್ಳುವ ಭರವಸೆ ನೀಡಿದ್ದಾರೆ.
-ಸೋಮಶೇಖರ್‌, ಜಿಲ್ಲಾ ಉಸ್ತುವಾರಿ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next