Advertisement
ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಂದೋಬಸ್ತ್ಗಾಗಿ 1200 ಪೊಲೀಸರನ್ನು ನಿಯೋಜಿಸಲಾಗಿತ್ತು. 7 ಡಿಎಆರ್ ತುಕಡಿಗಳು, 2 ಕೆಆಸ್‌ಆರ್‌ಪಿ ತುಕಡಿಗಳು, ಕಮ್ಯಾಂಡೋ, 300 ಹೋಂಗಾರ್ಡ್ ತಂಡಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಆಯಕಟ್ಟಿನ ಜಾಗಗಳಲ್ಲಿ ಪೊಲೀಸರ ಬಿಗಿ ಪಹರೆ ಏರ್ಪಡಿಸಲಾಗಿತ್ತು. ಶಾಂತಿ ಸುವ್ಯವಸ್ಥೆಗಾಗಿ ಅಪರಾಧ ಹಿನ್ನೆಲೆಯುಳ್ಳ 25 ಜನರನ್ನು ಮುಂಜಾಗ್ರತಾ ಕ್ರಮವನ್ನು ಬಂಧಿಸಲಾಗಿತ್ತು.
Related Articles
Advertisement
ಎಲ್ಲಾ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲಾಗುತ್ತಿದ್ದು, ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸುವವರ ಕುರಿತು ಹಾಗೂ ಈ ರೀತಿಯ ಕೃತ್ಯಗಳನ್ನು ಮಾಡಲು ಪ್ರಚೋದನೆ ಮಾಡುವವರ ಕುರಿತು ಹಾಗೂ ಈ ರೀತಿಯ ಕೃತ್ಯಗಳನ್ನು ಮಾಡುವವರ ಮೇಲೆ ನಿಗಾ ಇಡಲಾಗಿದ್ದು, ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು.
ಫೋನ್ ಕರೆ ಮಾಡಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವಂತೆ ಪ್ರಚೋದನಾಕಾರಿಯಾಗಿ ಯಾರನ್ನು ನಿಂದಿಸುವುದಾಗಲೀ, ಅವಮಾನಿಸುವುದಾಗಲೀ, ಚರ್ಚಿಸುವುದಾಗಲೀ ಮಾಡುವಂತಿಲ್ಲ ಎಂಬ ಸೂಚನೆಗಳನ್ನು ರಸ್ತೆ, ಬಡಾವಣೆಗಳಲ್ಲಿ ಮೈಕ್ ಮೂಲಕ ಘೋಷಿಸಲಾಯಿತು. ಎರಡನೇ ಶನಿವಾರವಾದ ಪ್ರಯುಕ್ತ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮುಚ್ಚಿದ್ದವು. ಹಾಗಾಗಿ ನಗರದಲ್ಲಿ ಜನ ಸಂಚಾರವೂ ವಿರಳವಾಗಿತ್ತು.
ಜಿಲ್ಲಾದ್ಯಂತ ನಿಷೇಧಾಜ್ಞೆ: ಅಯೋಧ್ಯೆ ತೀರ್ಪಿನ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾದ್ಯಂತ ನ.9ರ ಬೆಳಗ್ಗೆ 6 ಗಂಟೆಯಿಂದ ಮುಂದಿನ ಆದೇಶದವರೆಗೆ ಸಿ.ಆರ್.ಪಿ.ಸಿ.144ರ ಕಲಂ ಅನ್ವಯ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದರು.
ಮದ್ಯ ಮಾರಾಟ ನಿಷೇಧ: ಜಿಲ್ಲೆಯಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ನಗರ ಮತ್ತು ಗ್ರಾಮೀಣ ಪ್ರದೇಶ ಒಳಗೊಂಡಂತೆ ಜಿಲ್ಲಾ ವ್ಯಾಪ್ತಿಯೊಳಗೆ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಸೂಚಿತ ಅವಧಿಯಲ್ಲಿ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ಹಾಗೂ ಯಾವುದೇ ರೀತಿಯ ಮದ್ಯ ಮಾರಾಟ ಮಾಡದಂತೆ ಆದೇಶದಲ್ಲಿ ತಿಳಿಸಲಾಗಿದೆ.
ಬಿಡಿ ಪೆಟ್ರೋಲ್, ಪಟಾಕಿ ಮಾರಾಟವಿಲ್ಲ: ಜಿಲ್ಲಾದ್ಯಂತ ನ.9ರ ಬೆಳಗ್ಗೆ 6 ಗಂಟೆಯಿಂದ ನ.10ರ ಬೆಳಗ್ಗೆ 6 ಗಂಟೆಯವರೆಗೆ ಪಟಾಕಿ ಹಾಗೂ ಬಿಡಿ ಪೆಟ್ರೋಲ್ ಮಾರಾಟ ಮಾಡುವುದನ್ನು ಸಹ ಜಿಲ್ಲಾಧಿಕಾರಿಯವರು ನಿಷೇಧಿಸಿದ್ದಾರೆ.