Advertisement

ತಿಹಾರ್ ಜೈಲಿನಲ್ಲಿ ಆಪ್ ನಾಯಕನಿಗೆ ವಿಐಪಿ ಆತಿಥ್ಯ : ಜೈಲು ಅಧೀಕ್ಷಕ ಅಮಾನತು

04:48 PM Nov 14, 2022 | Team Udayavani |

ನವದೆಹಲಿ: ತಿಹಾರ್ ಜೈಲಿನಲ್ಲಿರುವ ದೆಹಲಿ ಸರ್ಕಾರದ ಸಚಿವ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಅವರಿಗೆ ವಿಐಪಿ ಚಿಕಿತ್ಸೆ ನೀಡುವ ವಿಷಯದಲ್ಲಿ ದೆಹಲಿ ಸರ್ಕಾರದ ಕಾರಾಗೃಹ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಈ ಪ್ರಕರಣದಲ್ಲಿ ತಿಹಾರ್ ಜೈಲು ಅಧೀಕ್ಷಕ ಅಜಿತ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ.

Advertisement

ಜೈಲು ನಂಬರ್ 7 ರ ಸೂಪರಿಂಟೆಂಡೆಂಟ್ ಆಗಿದ್ದ ಅಜಿತ್ ಕುಮಾರ್ ಅವರು ಸತ್ಯೇಂದ್ರ ಜೈನ್ ಅವರಿಗೆ ಜೈಲಿನಲ್ಲಿ ವಿಐಪಿ ಆತಿಥ್ಯವನ್ನು ನೀಡಿ ಸಹಕರಿಸುತ್ತಿದ್ದಾರೆ ಎಂದು ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಆರೋಪಿಸಿದ ನಂತರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ತನಿಖಾ ಸಮಿತಿಯ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ತಿಹಾರ್ ಜೈಲು ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ದೆಹಲಿ ಸರ್ಕಾರದ ಕಾರಾಗೃಹ ಇಲಾಖೆ ತಿಳಿಸಿದ್ದು. ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ಎಸಗಿರುವುದು ಪತ್ತೆಯಾಗಿದ್ದು, ಹೆಚ್ಚಿನ ತನಿಖೆಗೆ ಆದೇಶಿಸಲಾಗಿದೆ.

ಇದನ್ನೂ ಓದಿ :ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಟಂ ಟಂ ವಾಹನ: ಬಾಲಕ ದುರ್ಮರಣ 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next