ಮುಂಬಯಿ: ತಿಲಕ್ ನಗರ ಪೆಸ್ತೂಮ್ ಸಾಗರ್ ಕರ್ನಾಟಕ ಸಂಘದ ಕಚೇರಿಯ ನಿಧಿ ಸಂಗ್ರಹದ ಅಂಗವಾಗಿ ಸಾಂಸ್ಕೃ ತಿಕ ಸಂಭ್ರಮವು ಫೆ. 23ರಂದು ಅಪರಾಹ್ನ 2ರಿಂದ ಕುರ್ಲಾ ಪೂರ್ವದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.
ತಿಲಕ್ ನಗರ ಪೆಸ್ತೂಮ್‌ಸಾಗರ್ ಕರ್ನಾಟಕ ಸಂಘದ ಅಧ್ಯಕ್ಷ ರಾಮಣ್ಣ ಬಿ. ದೇವಾಡಿಗ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ಗೌರವಾಧ್ಯಕ್ಷ, ಉದ್ಯಮಿ ಸತೀಶ್ ಆರ್. ಶೆಟ್ಟಿ ಮತ್ತು ಸಂಘದ ನಿಧಿ ಸಂಗ್ರಹ ಸಮಿತಿಯ ಕಾರ್ಯಾಧ್ಯಕ್ಷ ಜಯ ಎ. ಶೆಟ್ಟಿ ಹಾಗೂ ಇತರ ಸಾಧಕರನ್ನು ಸಂಸ್ಥೆಯ ವತಿಯಿಂದ ಗಣ್ಯರ ಉಪಸ್ಥಿತಿಯಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿ ಸಲಾಯಿತು.
ಅತಿಥಿಯಾಗಿ ಬೋಂಬೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ನ್ಯಾಯ ವಾದಿ ಸುಭಾಷ್ ಬಿ. ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ,ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ಥಾಣೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಕುಶಲ್ ಸಿ. ಭಂಡಾರಿ, ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಕೆ. ಎಲ್. ಬಂಗೇರ, ಸಾಫಲ್ಯ ಸೇವಾ ಸಂಘ ಮುಂಬಯಿ ಅಧ್ಯಕ್ಷ ಶ್ರೀನಿವಾಸ ಪಿ. ಸಾಫಲ್ಯ, ದೇವಾಡಿಗ ಸಂಘ ಮುಂಬಯಿ ಉಪಾಧ್ಯಕ್ಷ ಸುರೇಶ್ ಎಸ್. ರಾವ್ ಉಪಸ್ಥಿತರಿದ್ದರು.
ಗೌರವಾಧ್ಯಕ್ಷ ಸತೀಶ್ ಆರ್. ಶೆಟ್ಟಿ, ಗೌರವ ಕೋಶಾಧಿಕಾರಿ ಅರುಣ್ ಕುಮಾರ್ ಆರ್. ಶೆಟ್ಟಿ, ಜತೆ ಕಾರ್ಯದರ್ಶಿ ಸಂಪತ್ ಎನ್. ಶೆಟ್ಟಿ, ಜತೆ ಕೋಶಾಧಿಕಾರಿ ಚಿತ್ರೇಶ್ ಎಸ್. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ನಾಗವೇಣಿ ಎಸ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ಶಿಲ್ಪಾ ಎಸ್. ಶೆಟ್ಟಿ, ಸ್ಥಾಪಕಾಧ್ಯಕ್ಷ ಶೇಖರ್ ಎನ್. ಶೆಟ್ಟಿ, ಮಾಜಿ ಅಧ್ಯಕ್ಷರಾದ ನ್ಯಾಯವಾದಿ ನಿತ್ಯಾನಂದ ಕೆ. ಶೆಟ್ಟಿ, ನಿಧಿ ಸಂಗ್ರಹ ಸಮಿತಿಯ ಗೌರವ ಕಾರ್ಯದರ್ಶಿ ಶ್ರೀಧರ ಕೆ. ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್ ಆರ್. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ಟಿ. ಆರ್. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿದರು. ಪತ್ರಕರ್ತ ದಯಾ ಸಾಗರ್ ಚೌಟ ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷ ಚಂದ್ರಹಾಸ್ ಎನ್. ಶೆಟ್ಟಿ ವಂದಿಸಿದರು. ಸಂಸ್ಥೆಯ ಪದಾಧಿಕಾರಿ ಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಯುವ ವಿಭಾಗ, ಮಹಿಳಾ ವಿಭಾಗದ ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಚಿತ್ರ-ವರದಿ: ಸುಭಾಷ್ ಶಿರಿಯಾ