Advertisement

Child Marriage: ನಾನು ಬದುಕಿರುವವರೆಗೂ ಬಾಲ್ಯ ವಿವಾಹಕ್ಕೆ ಅವಕಾಶ ನೀಡಲ್ಲ…: ಅಸ್ಸಾಂ ಸಿಎಂ

01:23 PM Feb 26, 2024 | Team Udayavani |

ಅಸ್ಸಾಂ: ಬಾಲ್ಯವಿವಾಹದ ಬಗ್ಗೆ ಅಸ್ಸಾಂ ವಿಧಾನಸಭೆಯಲ್ಲಿ ಸೋಮವಾರ ಚರ್ಚೆಚರ್ಚೆ ಮಾಡಲಾಗಿದ್ದು, ಚರ್ಚೆಯ ವೇಳೆ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.

Advertisement

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಶರ್ಮಾ, ‘ನನ್ನ ಮಾತನ್ನು ಎಚ್ಚರಿಕೆಯಿಂದ ಆಲಿಸಿ, ನಾನು ಬದುಕಿರುವವರೆಗೂ ಅಸ್ಸಾಂನಲ್ಲಿ ಬಾಲ್ಯ ವಿವಾಹಕ್ಕೆ ಅವಕಾಶ ನೀಡುವುದಿಲ್ಲ. ಸದನದಲ್ಲಿಯೇ ವಿಪಕ್ಷಗಳಿಗೆ ಸವಾಲು ಹಾಕಿದ ಮುಖ್ಯಮಂತ್ರಿ, 2026ರ ಮೊದಲು ನೀವು ತೆರೆದಿರುವ ಅಂಗಡಿಯನ್ನು ಮುಚ್ಚುತ್ತೇನೆ ಎಂದು ಕಾಂಗ್ರೆಸ್ ಸವಾಲು ಹಾಕಿದ್ದಾರೆ.

ಸದನದಲ್ಲಿ ಪ್ರತಿಪಕ್ಷಗಳ ವಿರುದ್ಧ ಸಿಟ್ಟಿಗೆದ್ದ ಸಿಎಂ ಶರ್ಮಾ ಅವರು ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಚಾಟಿ ಬೀಸಿದ್ದಾರೆ ‘ಕಾಂಗ್ರೆಸ್ ನವರು ನಾನು ಹೇಳಿದ್ದು ಕೇಳಬೇಕು, ನಾನು ಹಿಮಂತ ಬಿಸ್ವ ಶರ್ಮಾ ಬದುಕಿರುವವರೆಗೂ ಅಸ್ಸಾಂನಲ್ಲಿ ಬಾಲ್ಯ ವಿವಾಹಕ್ಕೆ ಅವಕಾಶ ನೀಡುವುದಿಲ್ಲ ಎಂದು ಬರೆದುಕೊಂಡಿದ್ದಾರೆ. ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳನ್ನು ನಾಶ ಮಾಡಲು ನೀವು ತೆರೆದಿರುವ ಅಂಗಡಿಯನ್ನು ಸಂಪೂರ್ಣವಾಗಿ ಮುಚ್ಚುವವರೆಗೂ ನಾವು ಶಾಂತಿಯಿಂದ ವಿಶ್ರಾಂತಿ ಪಡೆಯುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

ವಾಸ್ತವವಾಗಿ, ಅಸ್ಸಾಂ ಸರ್ಕಾರವು ರಾಜ್ಯದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲು ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆ, 1935 ಅನ್ನು ರದ್ದುಗೊಳಿಸಿದೆ. ಶುಕ್ರವಾರ ತಡರಾತ್ರಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ‘ಫೆಬ್ರವರಿ 23 ರಂದು, ಅಸ್ಸಾಂ ಕ್ಯಾಬಿನೆಟ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿತು ಮತ್ತು ವರ್ಷಗಳ ಹಳೆಯ ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ಹಿಂತೆಗೆದುಕೊಂಡಿತು.

ಇದನ್ನೂ ಓದಿ: ‘Akbar-Sita’ Lions Row: ಉನ್ನತ ಅಧಿಕಾರಿಯನ್ನು ಅಮಾನತುಗೊಳಿಸಿದ ತ್ರಿಪುರಾ ಸರ್ಕಾರ

Advertisement

 

Advertisement

Udayavani is now on Telegram. Click here to join our channel and stay updated with the latest news.

Next