ನವದೆಹಲಿ: ಪೌರತ್ವ ನಿಷೇಧ ಕಾಯ್ದೆ ವಿರುದ್ಧವಾಗಿ ದೇಶಾದ್ಯಂತ ನಡೆದ ಪ್ರತಿಭಟನೆಗಳು ಕೇಂದ್ರ ಸರಕಾರದ ನಿದ್ದೆಗೆಡಿಸಿದ್ದಂತೂ ಸುಳ್ಳಲ್ಲ. ಈ ನಡುವೆ ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ್ದ ಸಿಎಎ ವಿರೋಧಿ ಪ್ರತಿಭಟನೆಯ ಹಿಂದೆ ಪ್ರತಿಪಕ್ಷಗಳ ಕೈವಾಡ ಇದೆ ಎಂದು ಕೇಂದ್ರ ಸರಕಾರ ವಾದಿಸುತ್ತಿದೆ.
ಇದಕ್ಕೆ ಪೂರಕವಾಗಿ ಇಂದು ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ದೆಹಲಿಯಲ್ಲಿ ನಡೆದಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಯಲು ಪ್ರೇರಣೆ ನೀಡಿದ ದೇಶವಿರೋಧಿ ಗ್ಯಾಂಗ್ ಗಳನ್ನು (ತುಕ್ಡೇ ಗ್ಯಾಂಗ್) ಶಿಕ್ಷಿಸಲು ಇದೇ ಸಕಾಲ ಎಂದು ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಅಮಿತ್ ಶಾ ಅವರು ಈ ಪ್ರತಿಭಟನೆಯಲ್ಲಿ ವಿರೋಧ ಪಕ್ಷಗಳ ನೇತೃತ್ವ ವಹಿಸಿದ್ದ ಕಾಂಗ್ರೆಸ್ ಪಕ್ಷವನ್ನೂ ಸಹ ಅಮಿತ್ ಶಾ ಅವರು ತರಾಟೆಗೆ ತೆಗೆದುಕೊಂಡರು.
ಇದೇ ಸಂದರ್ಭದಲ್ಲಿ ಅಮಿತ್ ಶಾ ಅವರು ಈ ಪ್ರತಿಭಟನೆಯಲ್ಲಿ ವಿರೋಧ ಪಕ್ಷಗಳ ನೇತೃತ್ವ ವಹಿಸಿದ್ದ ಕಾಂಗ್ರೆಸ್ ಪಕ್ಷವನ್ನೂ ಸಹ ಅಮಿತ್ ಶಾ ಅವರು ತರಾಟೆಗೆ ತೆಗೆದುಕೊಂಡರು. ರಾಷ್ಟ್ರ ರಾಜಧಾನಿಯಲ್ಲಿ ಶಾಂತ ರೀತಿಯಲ್ಲಿ ನಡೆಯುತ್ತಿದ್ದ ಸಿಎಎ ವಿರೋಧಿ ಹೋರಾಟದ ಹಾದಿ ತಪ್ಪಿಸಿ ಅದು ಹಿಂಸಾ ಸ್ವರೂಪವನ್ನು ತಾಳುವಂತೆ ಮಾಡಿದ್ದೇ ಕಾಂಗ್ರೆಸ್ ಎಂದು ಶಾ ಅವರು ಕಿಡಿಕಾರಿದರು.
ಈ ಮಸೂದೆಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ ವಿಪಕ್ಷಗಳು ಯಾಕೆ ಇದರಲ್ಲಿರುವ ಆಕ್ಷೇಪಾರ್ಹ ಅಂಶಗಳ ಕುರಿತು ವಿಸ್ತೃತವಾಗಿ ಚರ್ಚಿಸಲಿಲ್ಲ ಎಂದು ಶಾ ಅವರು ವಿರೋಧ ಪಕ್ಷಗಳ ನಾಯಕರನ್ನು ಪ್ರಶ್ನಿಸಿದರು.