ಚಿಕ್ಕಬಳ್ಳಾಪುರ: ಜಿಲ್ಲೆಯ ವಿವಿಧ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರಿಗೆ ಹಾಗೂ ಸರ್ಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚಾಲಕ, ಡಿ ಗ್ರೂಪ್ ನೌಕರರಿಗೆ ತಿಂಗಳಾಂತ್ಯಕ್ಕೆ ಏಜನ್ಸಿಗಳಾಂತರ ಸಕಾಲದಲ್ಲಿ ವೇತನ ನೀಡಲು ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಸೂಚಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಿ ಗ್ರೂಪ್ ನೌಕರರಿಗೆ ಸಮರ್ಪಕವಾಗಿ ತಿಂಗಳ ತಿಂಗಳು ವೇತನ ಸೇರುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಿ ವೇತನ ಕೊಡಿಸಬೇಕೆಂದರು. ಮಾಸ್ಕ್ ಕಡ್ಡಾಯ ಮಾಡಿ: ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಹೊರ ರೋಗಿಗಳಿಗೆ ಕಡ್ಡಾಯವಾಗಿ ಮಾಸ್ಕ್ ನೀಡಬೇಕು ಹಾಗೂ ಎಲ್ಲಾ ತಾಲೂಕು ಆಸ್ಪತ್ರೆಗಳ ಮುಂಭಾಗದಲ್ಲಿ ವಾಹನಗಳ ನಿಲುಗಡೆ ಸಂಖ್ಯೆ ಹೆಚ್ಚಾಗುತ್ತಿದ್ದು, ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲು ಕ್ರಮ ವಹಿಸಬೇಕೆಂದರು.
ತ್ವರಿತವಾಗಿ ಪೂರ್ಣಗೊಳಿಸಿ: ಕೋವಿಡ್-19 ನಿಯಂತ್ರಣಕ್ಕೆ ಜನ ಜಾಗೃತಿ ಮುಖ್ಯ. ಮಾಸ್ಕ್, ಸ್ಯಾನಿಟೈಸರ್ ಬಳಕೆ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಕೂಲಿ ಕಾರ್ಮಿಕರಿಗೆ ಕೆಲಸ ಸಿಗುವ ನಿಟ್ಟಿನಲ್ಲಿ ನರೇಗಾ ಹಾಗೂ ವಿವಿಧ ಯೋಜನೆಗಳ ಮೂಲಕ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾಳಜಿ ವಹಿಸಿ ಕಾರ್ಯನಿರ್ವ ಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್ ಮಾತನಾಡಿ, ಎಲ್ಲಾ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಅಭಿವೃದಿಟಛಿಗಾಗಿ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಉಪಾಧ್ಯಕ್ಷೆ ನಿರ್ಮಲಾ, ಜಿಪಂ ಯೋಜನಾ ನಿರ್ದೇಶಕ ಗಿರಿಜಾ ಶಂಕರ್ ಹಾಗೂಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಮಾರ್ಗಸೂಚಿ ಉಲ್ಲಂಘಿಸಿದ 221 ಮಳಿಗೆಗಳಿಗೆ ನೋಟಿಸ್: ಜಿಲ್ಲೆಯಲ್ಲಿ 278 ಕೀಟನಾಶಕ ಮಾರಾಟ ಕೇಂದ್ರಗಳನ್ನು ಪರಿಶೀಲನೆ ಮಾಡಿ ಮಾರ್ಗಸೂಚಿ ಉಲ್ಲಂ ಸಿದ 221 ಮಾರಾಟ ಮಳಿಗೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಎಲ್.ರೂಪಾ ಸಭೆಯಲ್ಲಿ ಮಾಹಿತಿ ನೀಡಿದರು. 10 ಮಾರಾಟ ಮಳಿಗೆಗಳಿಗೆ ಮಾರಾಟ ತಡೆಯಾಜ್ಞೆ ನೀಡಿ 10 ಕೀಟನಾಶಕ ಅಂಗಡಿಗಳಿಗೆ ಸಂಬಂಧಿಸಿದಂತೆ ಕೋರ್ಟ್‌ನಲ್ಲಿ ಕೇಸ್ ದಾಖಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 311 ಕುಡಿಯುವ ನೀರು ಸಮಸ್ಯಾತ್ಮಕ ಗ್ರಾಮಗಳಿದ್ದು, ನಿತ್ಯ 97 ಗ್ರಾಮಕ್ಕೆ ಟ್ಯಾಂಕರ್‌ನಿಂದ ಕುಡಿಯುವ ನೀರು ಪೂರೈಸಲಾಗುತ್ತಿದೆ. ಉಳಿದ 213 ಗ್ರಾಮಗಳಿಗೆ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
-ಶಿವಕುಮಾರ್, ಇಇ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ