Advertisement

ಬೊಮ್ಮಾಯಿ ಸಂಪುಟದಲ್ಲಿ ಅವಕಾಶ ಸಿಗುತ್ತೆ ಅಂತ ಅಂದುಕೊಂಡಿದ್ದೇನೆ : ತಿಪ್ಪಾರೆಟ್ಟಿ

10:47 AM Jul 28, 2021 | Team Udayavani |

ಚಿತ್ರದುರ್ಗ :  ನನಗೆ ವಿಶ್ವಾಸ ಇದೆ, ಕಳೆದ ಬಾರಿ ನನಗೆ ಅವಕಾಶ ಕೊಟ್ಟಿಲ್ಲ, ಈ ಬಾರಿ ನನಗೆ ಅವಕಾಶ ಮಾಡಿಕೊಡುತ್ತಾರೆ ಅಂದುಕೊಂಡಿದ್ದೇನೆ.  ಚಿತ್ರದುರ್ಗಕ್ಕೆ ಸಚಿವ ಸ್ಥಾನ ನೀಡಿ, ನ್ಯಾಯ ಕೊಡುತ್ತಾರೆ ಅಂದುಕೊಂಡಿದ್ದೇನೆ ಎಂದು ಚಿತ್ರದುರ್ಗದಲ್ಲಿ ತಿಪ್ಪಾರೆ‍ಡ್ಡಿ ಹೇಳಿಕೆ ನೀಡಿದ್ದಾರೆ.

Advertisement

ಇದೇ ವೇಳೆ ಮಾತಿನಾಡಿದ ತಿಪ್ಪಾರೆಡ್ಡಿ,  ಬೊಮ್ಮಾಯಿ ಸಂಪುಟದಲ್ಲಿ ಅವಕಾಶ ಸಿಗುತ್ತೆ ಅಂತ ಅಂದುಕೊಂಡಿದ್ದೇನೆ.  ಕೊಟ್ಟರು, ಕೊಡದಿದ್ದರು ಕೆಲಸ ಮಾಡುತ್ತೇನೆ. ವರಿಷ್ಠರ ಜೊತೆಗೆ ಮಾತಾಡಿದ್ದೇನೆ, ಸಚಿವ ಸ್ಥಾನದ ಬಗ್ಗೆ ಮಾತಾಡಿಲ್ಲ, ನಾನು ತುಂಬಾ ಸೀನಿಯರ್ ಇದ್ದೇನೆ. ನನ್ನನ್ನು ಪರಿಗಣಿಸಬೇಕು ಎಂದರು.

ಸಮ್ಮಿಶ್ರ ಸರ್ಕಾರದಲ್ಲಿ, 20-20 ಸರ್ಕಾರದಲ್ಲಿ ಮತ್ತೆ ಯಡಿಯೂರಪ್ಪ ಸರ್ಕಾರದಲ್ಲಿ ಪದೇ ಪದೇ ಸಚಿವರನ್ನಾಗಿ ಮಾಡುತ್ತಿದ್ದಾರೆ. ಇದು ಸಮಾಧಾನ ಅಲ್ಲ , ಕೆಲವರನ್ನು ಬದಲಾವಣೆ ಮಾಡಿ ಹೊಸಬರಿಗೆ ಅವಕಾಶ ಕೊಡಬೇಕು.  ಈ ರಾಜ್ಯದ ಮೂಲೆ ಮೂಲೆಗಳಲ್ಲಿ ಯಾವ ಸಮಸ್ಯೆಗಳು ಇದೆ ಎಂದು ಬೊಮ್ಮಯಿ ಅವರಿಗೆ ಗೊತ್ತಿದೆ.  ಬೊಮ್ಮಯಿ ಅವರ ನೇತೃತ್ವದಲ್ಲಿ ರಾಜ್ಯ ಅಭಿವೃದ್ಧಿಯಾಗಲಿ ಎಂದು ತಿಪ್ಪಾರಡ್ಡಿ ಆಶಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next