ಕುಂದಾಪುರ: ಮಿನಿ ಟಿಪ್ಪರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಕುಮಾರ್ ಎಂಬುವರು ಗಂಭೀರ ಗಾಯಗೊಂಡು, ಬಳಿಕ ಸಾವನ್ನಪ್ಪಿದ ಘಟನೆ ವಡೇರಹೋಬಳಿ ಗ್ರಾಮದ ನೆಹರೂ ಮೈದಾನ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಬೆಳಗ್ಗಿನ ಜಾವ 8.45 ರ ಸುಮಾರಿಗೆ ಸಂಭವಿಸಿದೆ.
Advertisement
ಅಪಘಾತದಲ್ಲಿ ತಲೆಗೆ, ಮೈಕೈಗೆ ಗಂಭೀರ ಗಾಯಗೊಂಡಿದ್ದ ಕುಮಾರ್ ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಟಿಪ್ಪರ್ ಚಾಲಕನ ವೇಗದ ಹಾಗೂ ಅಜಾಗರೂಕತೆಯ ಚಾಲನೆಯೇ ಇದಕ್ಕೆ ಕಾರಣ ಎನ್ನಲಾಗಿದೆ.
ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.