Advertisement

ಟಿಪ್ಪು ಜಯಂತಿ: ಕೊಡಗಿನ ಎಲ್ಲಚೆಕ್‌ಪೋಸ್ಟ್‌ಗಳಲ್ಲಿ ಹದ್ದಿನ ಕಣ್ಣು

08:20 AM Nov 06, 2017 | |

ಮಡಿಕೇರಿ: ರಾಜ್ಯ ಸರಕಾರದ ವತಿಯಿಂದ ನ.10 ರಂದು ಟಿಪ್ಪು ಜಯಂತಿ ಆಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶವೆಂದೇ ಪರಿಗಣಿಸಲ್ಪಟ್ಟಿರುವ ಕೊಡಗು ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕೊಡಗು ಜಿಲ್ಲಾ ಪೊಲೀಸರು ಸಜ್ಜಾಗಿದ್ದಾರೆ.

Advertisement

ದಕ್ಷಿಣ ವಲಯದ ಐಜಿಪಿ ವಿಫ‌ುಲ್‌ ಕುಮಾರ್‌ ಅವರು ಮಡಿಕೇರಿಗೆ ಭೇಟಿ ನೀಡಿ ಎಸ್‌ಪಿ ಕಚೇರಿಯಲ್ಲಿ ಜಿಲ್ಲೆಯ ಪೊಲೀಸ್‌ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಿದರು. ಟಿಪ್ಪು ಜಯಂತಿ ಆಚರಣೆ ಸಂದರ್ಭ ಅಶಾಂತಿ ಮೂಡಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ.ರಾಜೇಂದ್ರಪ್ರಸಾದ್‌ ಸೇರಿ ಜಿಲ್ಲೆಯ ಎಲ್ಲಾ ಪೊಲೀಸ್‌ ಅಧಿಕಾರಿಗಳು ಉಪಸ್ಥಿತರಿದ್ದರು.

ಮತ್ತೂಂದೆಡೆ ಎಸ್‌ಪಿ ರಾಜೇಂದ್ರಪ್ರಸಾದ್‌ ಅವರು, ಕೇರಳದ ಕಣ್ಣೂರು, ವಯನಾಡ್‌, ಕಾಸರಗೋಡು ಹಾಗೂ ಹಾಸನ, ಮೈಸೂರು ಜಿಲ್ಲೆಗೆ ಹೊಂದಿಕೊಂಡಂತಹ 10 ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು. ನ.10ರಂದು ಟಿಪ್ಪು ಜಯಂತಿ ಆಚರಣೆ ನಡೆಯುತ್ತಿರುವ ಕಾರಣ ತೀವ್ರ ನಿಗಾ ವಹಿಸಿರುವ ಕೊಡಗು ಪೊಲೀಸರು ಚೆಕ್‌ ಪೋಸ್ಟ್‌ಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ.

ಹೇಳಿದ್ರೂ ಹೆಸರು ಹಾಕಿದ್ದಕ್ಕೆ ಸಚಿವ ಅನಂತ್‌ ಹೆಗಡೆ ಗರಂ
ಚನ್ನಗಿರಿ (ದಾವಣಗೆರೆ): “ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳಲ್ಲ. ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಬೇಡಿ ಎಂದು ಹೇಳಿದ್ದರೂ ಬೆಳಗಾವಿ ಜಿಲ್ಲೆಯಲ್ಲಿ ನಡೆಯುವ ಟಿಪ್ಪು ಜಯಂತಿ ಆಚರಣೆಯ ಆಹ್ವಾನ ಪತ್ರದಲ್ಲಿ ನನ್ನ ಹೆಸರು ಹಾಕಿದ್ದಾರೆ. ನನ್ನ ಮಾತನ್ನು  ಲೆಕ್ಕಿಸದೇ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿದ್ದಕ್ಕೆ ಮುಂದೆ ಏನಾಗುತ್ತದೆ ಎಂಬುದನ್ನು ಕಾದು ನೋಡಿ’ ಎಂದು ಕೇಂದ್ರ ಸರ್ಕಾರದ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತಾ ರಾಜ್ಯ ಸಚಿವ ಅನಂತ್‌ಕುಮಾರ್‌ ಹೆಗಡೆ ಕಿಡಿ ಕಾರಿದ್ದಾರೆ.

ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳಲ್ಲ ಎಂದು ಮೊದಲೇ ಹೇಳಿದ್ದೇನೆ. ಆದರೂ, ಬೆಳಗಾವಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿದ್ದಾರೆ. ಮುಂದೇನಾಗುತ್ತೆ ಎಂಬುದನ್ನು ಕಾದು ನೋಡಲಿ’ ಎಂದು ಆಯೋಜಕರಿಗೆ ಸವಾಲು ಹಾಕಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next