ಬೆಂಗಳೂರು: ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳ ತೀವ್ರ ವಿರೋಧದ ನಡುವೆಯೇ ರಾಜ್ಯ ಸರಕಾರದ ವತಿಯಿಂದ ವಿಧಾನಸೌಧ ಸಹಿತ ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಶುಕ್ರವಾರ ಟಿಪ್ಪು ಜಯಂತಿ ಆಚರಿಸಲಾಗುತ್ತಿದ್ದು, ಹಲವು ಪ್ರತಿಭಟನಾ ಕಾರರನ್ನು ವಶಕ್ಕೆ ಪಡೆಯಲಾಗಿದೆ.
ಮಡಿಕೇರಿಯಲ್ಲಿ ನಿಷೇಧಾಜ್ಞೆಯ ಹೊರತಾಗಿಯೂ ಭಾರೀ ಪ್ರತಿಭಟನೆಗಳನ್ನು ನಡೆಸಲಾಗುತ್ತಿದ್ದು ಹಲವರನ್ನು ವಶಕ್ಕೆ ಪಡೆಯಲಾಗಿದೆ.
ಮಡಿಕೇರಿಯ ಕಾಲೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಜಿಲ್ಲಾದ್ಯಂತ ಕಳೆದ ಬಾರಿ ಟಿಪ್ಪು ಜಯಂತಿ ವೇಳೆ ಘರ್ಷಣೆಯಲ್ಲಿ ಸಾವನ್ನಪ್ಪಿದ ಕುಟ್ಟಪ್ಪ ಅವರ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸಂಪೂರ್ಣ ಬಂದ್ ವಾತಾವರಣ ಕಂಡು ಬಂದಿದೆ.
ಮಂಗಳೂರಿನಲ್ಲೂ ಪ್ರತಿಭಟನೆಗಳು ನಡೆದಿದ್ದು ಹಲವರನ್ನು ವಶಕ್ಕೆ ಪಡೆಯಾಲಾಗಿದೆ.
ಮಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಏಕಾಂಗಿಯಾಗಿ ಬಂದಿದ್ದ ಬಿಜೆಪಿ ನಾಯಕ ಫ್ರಾಂಕ್ಲಿನ್ ಮೊಂತೆರೋ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.