Advertisement
ಸಂಜೆ 6.30ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಹಾಗೂ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಸದಸ್ಯ ಪಿ.ಸಿ.ಮೋಹನ್ ಅವರ ಹೆಸರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಧಾನಸಭೆ ಸ್ಪೀಕರ್ ಕೆ.ಬಿ.ಕೋಳಿವಾಡ, ಸಚಿವರಾದ ರೋಷನ್‌ಬೇಗ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಉಮಾಶ್ರೀ ಸೇರಿ ಅಲ್ಪಸಂಖ್ಯಾತರ ಪರವಾಗಿ ಸಚಿವರಾದ
ತನ್ವೀರ್ ಸೇs…, ಯು.ಟಿ.ಖಾದರ್, ರಾಜ್ಯಸಭೆ ಸದಸ್ಯ ರೆಹಮಾನ್ ಖಾನ್, ದೆಹಲಿಯಲ್ಲಿ ಸರ್ಕಾರದ ಪ್ರತಿನಿಧಿ ಸಲೀಂ ಅಹಮದ್, ಶಾಸಕರಾದ ಎನ್.ಎ.ಹ್ಯಾರೀಸ್, ಜಮೀರ್ ಅಹಮದ್, ಪರಿಷತ್ ಸದಸ್ಯರಾದ ಸಿ.ಎಂ. ಇಬ್ರಾಹಿಂ, ರಿಜ್ವಾನ್ ಹರ್ಷದ್, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ್ ಅಹಮದ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಅಧ್ಯಕ್ಷ ಎಂ.ಎ.ಗಫೂರ್ ಅವರನ್ನು ಆಹ್ವಾನಿಸಲಾಗಿದೆ. ಆಮೀರ್ ಎ ಷರಿಯತ್ ನ ಹಜರತ್ ಮೌಲಾನಾ ಸಗೀರ ಅಹ್ಮದ್ ಖಾನ ಸಾಹೇಬ್ ರಷಾದಿ ಹಾಗೂ ಉರಿ ಲಿಂಗಪೆದ್ದಿಗಳ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಜೆ.ಆರ್.ಲೋಬೋ ವಿಶೇಷ ಆಹ್ವಾನಿತರಾಗಿದ್ದಾರೆ. ಡಾ.ಎಲ್.ಹನುಮಂತಯ್ಯ ಟಿಪ್ಪು ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಮಂಗಳೂರು: ಕ್ರೈಸ್ತರ ಮೇಲೆ ಕ್ರೌರ್ಯ ನಡೆಸಿದ ಟಿಪ್ಪು ವಿನ ಜಯಂತಿಯನ್ನು ಆಚರಿಸಲು ರಾಜ್ಯ ಸರಕಾರ ಮುಂದಾಗಿರುವುದು ಖಂಡನೀಯ. ಟಿಪ್ಪುವಿನ ಕ್ರೌರ್ಯಕ್ಕೆ ಒಳಗಾದ ಕೆನರಾ ಕ್ರೈಸ್ತರ ಸಮುದಾಯದಿಂದಲೇ ಬಂದಿ ರುವ ಶಾಸಕರಾದ ಜೆ.ಆರ್. ಲೋಬೋ, ಐವನ್ ಡಿ’ಸೋಜಾ ಮತ್ತು ಸಂಸದ ಆಸ್ಕರ್ ಫರ್ನಾಂಡಿಸ್ ಟಿಪ್ಪುವಿನ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು. ತಪ್ಪಿದಲ್ಲಿ ಮುಂದಿನ ಚುನಾವಣೆಯಲ್ಲಿ ಟಿಪ್ಪುವಿನ ಹೆಸರಿನಲ್ಲೇ ಮತ ಯಾಚನೆ ನಡೆಸಲಿ ಎಂದು ಕೆನರಾ ಕ್ರಿಶ್ಚಿಯನ್ಸ್ ವೇದಿಕೆ ಸವಾಲು ಹಾಕಿದೆ. ಆಮಂತ್ರಣ ಪತ್ರಿಕೆ: ಹೆಸರಿಗೆ ಕೊಕ್
ಬೆಂಗಳೂರು: ಧಾರವಾಡ ಜಿಲ್ಲಾಡಳಿತದಿಂದ ನಡೆಯಲಿರುವ ಟಿಪ್ಪು ಜಯಂತಿ ಆಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ಸಂಸದ ಪ್ರಹ್ಲಾದ ಜೋಶಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಅವರ ಹೆಸರನ್ನು ಕೈಬಿಡಲಾಗಿದೆ. ಸಂಸದೆ ಶೋಭಾ ಕರಂದ್ಲಾಜೆ ಹಾಗೂ ವಿಧಾನ ಪರಿಷತ್ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ಅವರ ಹೆಸರನ್ನೂ ಚಿಕ್ಕ ಮಗಳೂರು ಜಿಲ್ಲಾಡಳಿತ ಕೈಬಿಟ್ಟಿದೆ. ತಮ್ಮ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸದಂತೆ ಈ ಹಿಂದೆಯೇ ಶೋಭಾ ಕರಂದ್ಲಾಜೆ ಹಾಗೂ ಕ್ಯಾ| ಗಣೇಶ್ ಕಾರ್ಣಿಕ್ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು.
Related Articles
ಚಿತ್ರದುರ್ಗ: ಟಿಪ್ಪು ಜಯಂತಿ ಅಂಗವಾಗಿ ಜಿಲ್ಲಾಡಳಿತ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಹಾಗೂ ನಿಷೇಧಾಜ್ಞೆ ತೆರವುಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ಇಲ್ಲಿನ ಜಿಲ್ಲಾ ನ್ಯಾಯಾ ಲಯ ವಜಾಗೊಳಿಸಿದೆ.
Advertisement
ಕಾನೂನು ಸುವ್ಯವಸ್ಥೆಗೆ ಧಕ್ಕೆತಂದರೆ ಕ್ರಮಗೃಹ ಸಚಿವ ರಾಮಲಿಂಗಾರೆಡ್ಡಿ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಗುರುವಾರ ಸಭೆ ನಡೆಸಿದರು. ನಂತರ ಟಿಪ್ಪು ಜಯಂತಿ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಯಾರೇ ಮಾಡಿದರೂ ಎಷ್ಟೇ ದೊಡ್ಡವರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಟಿಪ್ಪು ಜಯಂತಿ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲ ರೀತಿಯ ಭದ್ರತೆ ಕೈಗೊಳ್ಳಲಾಗಿದೆ. ಈ ಬಾರಿ ಟಿಪ್ಪು ಜಯಂತಿ ಸುಸೂತ್ರವಾಗಿ ನಡೆಯಲಿದೆ ಎಂದು ಹೇಳಿದರು.