Advertisement
ಕೋವಿಡ್ 19 ಹಿನ್ನೆಲೆಯಲ್ಲಿ ಶೇ.30ರಷ್ಟು ಪಠ್ಯವನ್ನು ಈಗಾಗಲೇ ಕಡಿತಗೊಳಿಸಲಾಗಿದ್ದು, ಅದರ ಅಪ್‌ಲೋಡ್ ಕಾರ್ಯ ಕರ್ನಾಟಕ ಪಠ್ಯಪುಸ್ತಕ ಸಂಘದಲ್ಲಿ ನಡೆಯುತ್ತಿದೆ.
ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳು ಒಂದು ಪಾಠವನ್ನು ಒಮ್ಮೆ ಮಾತ್ರ ಅಭ್ಯಾಸ ಮಾಡಲು ಅನುಕೂಲ ಆಗುವಂತೆ ಪ್ರಸಕ್ತ ಪರಿಸ್ಥಿತಿಗೆ ಅನುಗುಣವಾಗಿ ಪರಿಷ್ಕರಿಸಲಾಗಿದೆ. 7ನೇ ತರಗತಿಯ 5ನೇ ಅಧ್ಯಾಯ ಮೈಸೂರಿನ ಒಡೆಯರ ಪರಿಚಯ ಪಾಠದಲ್ಲಿ ಹೈದರಲಿ ಮತ್ತು ಟಿಪ್ಪು ಸುಲ್ತಾನ್, ಕಮಿಷನರ್‌ಗಳ ಆಡಳಿತ, ಮಾರ್ಕ್ ಕಬ್ಬನ್, ಲೂಯಿ ಬೆಂಥಾಯ್, ಬೋರಿಂಗ್, ನಾಲ್ವಡಿ ಕೃಷ್ಣರಾಜ ಒಡೆಯರ್ ಸಾಧನೆಗಳನ್ನು ಕುರಿತ ವಿಸ್ತೃತ ಪಠ್ಯವಿತ್ತು. ಈ ಪೈಕಿ ಹೈದರಲಿ ಮತ್ತು ಟಿಪ್ಪು ಸುಲ್ತಾನ್, ಮೈಸೂರಿನ ಚಾರಿತ್ರಿಕ ಸ್ಥಳಗಳು ಹಾಗೂ ಕಮಿಷನರ್ ಆಳ್ವಿಕೆ ಎಂಬ ಅಂಶಗಳನ್ನು ಕೈಬಿಡಲಾಗಿದೆ.