Advertisement
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಡಾಲರ್ ಕಾಲನಿ ನಿವಾಸದ ಬಳಿ ಈ ಬಗ್ಗೆ ಪ್ರತಿಕ್ರಿಯಿಸಿ, ಪಠ್ಯದಲ್ಲಿ ಟಿಪ್ಪು ಇತಿಹಾಸ ಅಧ್ಯಾಯದ ಬಗ್ಗೆ ಯಾವುದೇ ಗೊಂದಲವಿಲ್ಲ. ಬೆಳಗ್ಗೆ ಸಚಿವ ಎಸ್. ಸುರೇಶ್ ಕುಮಾರ್ ಅವರು ಬಂದು ಚರ್ಚಿಸಿದರು. ಟಿಪ್ಪು ಸುಲ್ತಾನ್ ಪಠ್ಯದ ವಿಚಾರದಲ್ಲಿ ಸಮಿತಿಯಿಂದ ವರದಿ ಪಡೆದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು. ಈ ಬಗ್ಗೆ ಗೊಂದಲ ಏನೂ ಇಲ್ಲ. ನಮ್ಮ ನಿಲುವಿನಲ್ಲೂ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.
ಕೆಲವು ಸಚಿವರು ಪಠ್ಯಪುಸ್ತಕಗಳಲ್ಲಿ ಟಿಪ್ಪು ಅಧ್ಯಾಯ ರದ್ದು ವಿಚಾರದ ಬಗ್ಗೆ ಪ್ರಸ್ತಾವಿಸಿದರು. ಮತ್ತೆ ಕೆಲವರು ಇದೊಂದು ಸೂಕ್ಷ್ಮ ವಿಚಾರ, ಸರಿಯಾಗಿ ನಿರ್ವಹಣೆ ಮಾಡಬೇಕು ಎಂದು ಸಲಹೆ ನೀಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಸಚಿವ ಸುರೇಶ್‌ಕುಮಾರ್ ಅವರು ಅದಕ್ಕಾಗಿ ಸಮಿತಿ ಮಾಡಿದ್ದಾರೆ. ಆ ಸಮಿತಿ ನೀಡುವ ವರದಿ ಮೇಲೆ ಕ್ರಮ ಕೈಗೊಳ್ಳೋಣ ಎಂದು ಹೇಳಿದರು ಎಂದು ತಿಳಿದು ಬಂದಿದೆ. ಆದರೆ ಸಚಿವ ಮಾಧುಸ್ವಾಮಿ ಅವರನ್ನು ಈ ಬಗ್ಗೆ ಪ್ರಶ್ನಿಸಿದಾಗ ಆ ವಿಚಾರ ಪ್ರಸ್ತಾವಕ್ಕೆ ಬರಲಿಲ್ಲ ಎಂದರು.