Advertisement

ಟಿಪ್ಪು ಸುಲ್ತಾನ್‌ ಜಾತ್ಯತೀತ ರಾಜ: ಸಿದ್ದರಾಮಯ್ಯ

10:33 PM Nov 10, 2021 | Team Udayavani |

ಬೆಂಗಳೂರು: ಟಿಪ್ಪು ಸುಲ್ತಾನ್‌ ಜಾತ್ಯತೀತ ರಾಜ ಮತ್ತು ಜನನಾಯಕ. ಮತಾಂಧತೆ ಕಾರಣದಿಂದ ಆರೆಸ್ಸೆಸ್‌ ಟಿಪ್ಪುವನ್ನು ವಿರೋಧಿಸುತ್ತದೆ. ಇದಕ್ಕೆ “ಡೋಂಟ್‌ ಕೇರ್‌’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಟಿಪ್ಪು ಜಯಂತಿ ಪ್ರಯುಕ್ತ ಶುಭಕೋರಲು ಮಾಜಿ ಸಚಿವ ಜಮೀರ್‌ ಅಹಮದ್‌ ನೇತೃತ್ವದಲ್ಲಿ ತಮ್ಮ ನಿವಾಸಕ್ಕೆ ಮುಸ್ಲಿಂ ಮುಖಂಡರು ಆಗಮಿಸಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, ಬ್ರಿಟಿಷರ ನಿದ್ದೆಗೆಡಿಸಿದ್ದ ಟಿಪ್ಪು ಆಸ್ಥಾನದಲ್ಲಿ ದಿವಾನ ಹಾಗೂ ಮಂತ್ರಿಗಳಾಗಿದ್ದವರು ಹಿಂದೂಗಳೇ ಆಗಿದ್ದರು ಎಂದರು.

“ಉಳುವವನೇ ಭೂ ಒಡೆಯ’ ಕಾನೂನನ್ನು ಮೊದಲಿಗೆ ಜಾರಿಗೆ ತಂದಿದ್ದು ಹೈದರಲಿ. ಕನ್ನಂಬಾಡಿ ಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು. ಶೃಂಗೇರಿ ಸೇರಿ ಹಲವು ಮಠ, ಮಂದಿರಗಳಿಗೆ ಟಿಪ್ಪು ರಕ್ಷಣೆ, ನೆರವು ನೀಡಿರುವುದಕ್ಕೆ ಅಪಾರ ದಾಖಲೆಗಳಿವೆ ಎಂದು ಹೇಳಿದರು.

ಟಿಪ್ಪು ಎಲ್ಲೆಲ್ಲಿ ಮಸೀದಿ ಕಟ್ಟಿಸಿದ್ದರೋ ಅದರ ಪಕ್ಕದಲ್ಲೇ ದೇವಸ್ಥಾನಗಳನ್ನೂ ಕಟ್ಟಿಸುತ್ತಿದ್ದರು ಎನ್ನುವುದಕ್ಕೂ ದಾಖಲೆಗಳಿವೆ. ಧರ್ಮದ ಕಾರಣಕ್ಕೆ ಟಿಪ್ಪುವನ್ನು ವಿರೋಧಿಸುವ ಆರೆಸ್ಸೆಸ್‌ ಯಾವತ್ತೂ ಬ್ರಿಟಿಷರ ವಿರುದ್ಧ ಹೋರಾಡಿಲ್ಲ ಎಂದರು.

ಇದನ್ನೂ ಓದಿ:ಮೋದಿಗೆ ಕೆಸಿಆರ್‌ ಸೆಡ್ಡು: ಬಿಜೆಪಿ ಆರೋಪ

Advertisement

ನಮ್ಮ ಸರಕಾರದ ಅವಧಿಯಲ್ಲಿ ಕೆಂಪೇಗೌಡ ಜಯಂತಿ, ಕಿತ್ತೂರು ರಾಣಿ ಚನ್ನಮ್ಮ ಜಯಂತಿ, ಟಿಪ್ಪು ಜಯಂತಿ ಆಚರಣೆ ಆರಂಭಿಸಿದ ಹೆಮ್ಮೆ ನಮ್ಮದು ಎಂದು ಹೇಳಿದರು.

ದಲಿತ ಮುಖ್ಯಮಂತ್ರಿ ವಿಚಾರ ಕುರಿತು ಪ್ರತಿಕ್ರಿಯಿಸಿ, ದಲಿತರು ಮುಖ್ಯಮಂತ್ರಿಗಳಾಗಿರುವ ಚರಿತ್ರೆ ಮತ್ತು ವರ್ತಮಾನ ಇರುವುದು ಕಾಂಗ್ರೆಸ್ಸಿಗೆ ಮಾತ್ರ. ರಾಜ್ಯದಲ್ಲಿ ಈಗ ಬಿಜೆಪಿಯದೇ ಸರಕಾರ ಇದೆ. ಬೊಮ್ಮಾಯಿ ಅವರನ್ನು ಕೆಳಗಿಳಿಸಿ ದಲಿತರನ್ನು ಮುಖ್ಯಮಂತ್ರಿ ಮಾಡಲಿ. ನಮ್ಮ ಸರಕಾರ ಇರುವ ಪಂಜಾಬ್‌ನಲ್ಲಿ ನಾವು ದಲಿತ ಮುಖ್ಯಮಂತ್ರಿ ಮಾಡಿದ್ದೇವೆ. ಬಿಜೆಪಿಯರವರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡಲು ಅವಕಾಶ ಇದೆ. ಮಾಡಿ ತೋರಿಸಲಿ ಎಂದು ಮರು ಸವಾಲು ಹಾಕಿದರು. ಮಾಜಿ ಸಚಿವರಾದ ಜಮೀರ್‌ ಅಹಮದ್‌, ಎಂ.ಬಿ.ಪಾಟೀಲ್‌, ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ ಹಲವು ನಾಯಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next