Advertisement

ಟಿಪ್ಪು ಜಯಂತಿ ಜಟಾಪಟಿ; ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ನಿಷೇಧಾಜ್ಞೆ

06:36 PM Nov 09, 2018 | Sharanya Alva |

ಮಂಗಳೂರು/ಮಡಿಕೇರಿ: ರಾಜ್ಯ ಸರ್ಕಾರ ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ, ಕೊಡಗು, ಕೋಲಾರ, ಚಿಕ್ಕಮಗಳೂರು, ಮೈಸೂರು, ಶ್ರೀರಂಗಪಟ್ಟಣ ಸೇರಿದಂತೆ ವಿವಿಧೆಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸಂಜೆ 6ರಿಂದ ಭಾನುವಾರ ಬೆಳಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Advertisement

ಮತಾಂಧ, ಕನ್ನಡದ್ರೋಹಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವುದು ಬೇಡ ಎಂದು ಬಿಜೆಪಿ ಕಾರ್ಯಕರ್ತರು, ಮುಖಂಡರು ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಿದ್ದರು.

ಏತನ್ಮಧ್ಯೆ ಬಿಜೆಪಿ ವಿರೋಧವನ್ನು ಲೆಕ್ಕಿಸದೇ ಟಿಪ್ಪು ಜಯಂತಿ ಆಚರಿಸುತ್ತಿರುವುದರಿಂದ ಅಹಿತಕರ ಘಟನೆ ನಡೆಯಬಾರದು ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ, ಮಡಿಕೇರಿ, ಕೋಲಾರ, ಚಿಕ್ಕಮಗಳೂರು, ಶ್ರೀರಂಗಪಟ್ಟಣದಲ್ಲಿ ಪೊಲೀಸ್ ಅಧಿಕಾರಿಗಳು, ಅರೆಸೇನಾಪಡೆ ಪಥಸಂಚಲನ ನಡೆಸಿದೆ. ಬಹುತೇಕ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next