Advertisement

ಟಿಪ್ಪು ಪಠ್ಯ: ವರದಿಗೆ ಸೂಚನೆ

10:25 AM Oct 30, 2019 | mahesh |

ಬೆಂಗಳೂರು: ಟಿಪ್ಪು ಸುಲ್ತಾನ್‌ ಕುರಿತ ಪಠ್ಯವನ್ನು ಉಳಿಸಿಕೊಳ್ಳಬೇಕೇ ಅಥವಾ ತೆಗೆದು ಹಾಕಬೇಕೇ ಮತ್ತು ಅದರ ಸಾಧಕ-ಬಾಧಕಗಳ ಕುರಿತು ಚರ್ಚಿಸಿ 3 ದಿನಗಳೊಳಗೆ ವರದಿ ಸಲ್ಲಿಸುವಂತೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದಾರೆ.

Advertisement

ಟಿಪ್ಪು ಸುಲ್ತಾನ್‌ ಕುರಿತಾದ ಪಠ್ಯವನ್ನು ತೆಗೆದು ಮುಂದಿನ ಪೀಳಿಗೆಗೆ ದೇಶಪ್ರೇಮ, ರಾಷ್ಟ್ರ ಭಕ್ತಿ ಮೂಡಿಸುವ ಪಠ್ಯವನ್ನು ಅಳವಡಿಸ ಬೇಕೆಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್‌ ಮನವಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಇತಿಹಾಸ ಪಠ್ಯ ಪುಸ್ತಕದಲ್ಲಿರುವ ಟಿಪ್ಪು ಪಠ್ಯದ ಕುರಿತು ಇತಿಹಾಸ ಪಠ್ಯಪುಸ್ತಕ ರಚನ ಸಮಿತಿ ಸಭೆ ಕರೆಯಬೇಕು. ಆ ಸಭೆಗೆ ಶಾಸಕ ಅಪ್ಪಚ್ಚು ರಂಜನ್‌ ಅವರನ್ನೂ ಆಹ್ವಾ ನಿಸ ಬೇಕು. ಟಿಪ್ಪು ಸುಲ್ತಾನ್‌ ಕುರಿತ ಪಠ್ಯದ ಅಗತ್ಯ ಮತ್ತು ಅದನ್ನು ಉಳಿಸಿ ಕೊಳ್ಳುವ ಇಲ್ಲವೇ ತೆಗೆದು ಹಾಕುವ ಕುರಿತು ಸಾಧಕ- ಬಾಧಕಗಳನ್ನು ಚರ್ಚಿಸಿ ಮೂರು ದಿನಗಳಲ್ಲಿ ವರದಿ ಸಲ್ಲಿಸಲು ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಲಿಖೀತ ಸೂಚನೆ ಯನ್ನು ಸಚಿವರು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next