Advertisement

ಬಿಜೆಪಿ ಸಂಸದ ತಿರಥ್ ಸಿಂಗ್ ರಾವತ್ ಗೆ ಉತ್ತರಾಖಂಡ್ ಮುಖ್ಯಮಂತ್ರಿ ಪಟ್ಟ

12:03 PM Mar 10, 2021 | Team Udayavani |

ನವದೆಹಲಿ: ಭಾರತೀಯ ಜನತಾ ಪಕ್ಷದ ಸಂಸದ ತಿರಥ್ ಸಿಂಗ್ ರಾವತ್ ಉತ್ತರಾಖಂಡ್ ನ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಡೆಹ್ರಾಡೂನ್ ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಬುಧವಾರ(ಮಾರ್ಚ್ 10) ಘೋಷಿಸಿದ್ದಾರೆ.

Advertisement

ತಿರಥ್ ಸಿಂಗ್ ರಾವತ್ ಉತ್ತರಾಖಂಡ್ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರಾಗಿದ್ದು, 2000-2002ರವರೆಗೆ ಉತ್ತರಾಖಂಡ್ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದರು. ಇಂದು ಸಂಜೆ 4ಗಂಟೆಗೆ ಮುಖ್ಯಮಂತ್ರಿಯಾಗಿ ತಿರಥ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿ ತಿಳಿಸಿದೆ.

ತ್ರಿವೇಂದ್ರ ಸಿಂಗ್ ರಾವತ್ ಮಂಗಳವಾರ(ಮಾರ್ಚ್ 09) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತ್ರಿವೇಂದ್ರ ಸಿಂಗ್ ಅವರು ಮುಖ್ಯಮಂತ್ರಿಯಾಗಿ ನಾಲ್ಕು ವರ್ಷಗಳ ಕಾಲ ಹೆಚ್ಚಿನ ಸಾಧನೆ ಮಾಡಿಲ್ಲ, ಏತನ್ಮಧ್ಯೆ 2022ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ರಾವತ್ ಅವರನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗಲು ಸಾಧ್ಯವಿಲ್ಲ ಎಂದು ಪಕ್ಷದ ಶಾಸಕರು, ಸಚಿವರು ಹೈಕಮಾಂಡ್ ಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ತ್ರಿವೇಂದ್ರ ಸಿಂಗ್ ರಾವತ್ ಗೆ ಸೂಚನೆ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next