Advertisement
ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯು ಓದುತ್ತಿದ್ದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿರುಕುಳ ನೀಡು ತ್ತಿದ್ದ ಆರೋಪದಡಿ ಮಾವನ ಮಗ ಸ್ವಾಗತ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ವೈದ್ಯ ಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಲ ಯಕ್ಕೆ ಹಾಜರು ಪಡಿಸಲಾಗಿತ್ತು. ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸ್ವಾಗತ್ ಹಾಗೂ ಆತ್ಮಹತ್ಯೆ ಮಾಡಿ ಕೊಂಡಿರುವ ವಿದ್ಯಾರ್ಥಿನಿ ಹಲವು ವರ್ಷಗಳಿಂದ ಚೆನ್ನಾಗಿದ್ದರು. ಆದರೆ, ಇತ್ತೀಚೆಗೆ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿ ಗಲಾಟೆ ಮಾಡಿಕೊಳ್ಳುತ್ತಿದ್ದರು. ಅದಕ್ಕೆ ಕೋಪಗೊಂಡಿದ್ದ ಆರೋಪಿ, ವಿದ್ಯಾರ್ಥಿನಿಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುವುದು, ಸಾರ್ವಜನಿಕವಾಗಿ ಸಿಕ್ಕ ಕಡೆಯಲ್ಲಿ ನಿಂದಿಸುವುದು ಮಾಡುತ್ತಿದ್ದ. ಅದರಿಂದ ಬೇಸತ್ತ ವಿದ್ಯಾರ್ಥಿನಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Advertisement
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
11:05 AM Nov 14, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.