Advertisement

ಗುಜರಾತ್:ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಹ್ಮದ್ ಪಟೇಲ್ ಪುತ್ರ ಫೈಸಲ್ ಮುನಿಸು,AAP ಸೇರ್ಪಡೆ?

03:38 PM Apr 06, 2022 | Team Udayavani |

ನವದೆಹಲಿ: ಪಂಜಾಬ್ ಮತ್ತು ಜಾರ್ಖಂಡ್ ನಲ್ಲಿ ಕಾಂಗ್ರೆಸ್ ಪಕ್ಷದ ಬಿಕ್ಕಟ್ಟಿನ ನಡುವೆ ಇದೀಗ ಗುಜರಾತ್ ನಲ್ಲಿಯೂ ಮುಂದುವರಿದಿದ್ದು, ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಕಾದು, ಕಾದು ಸಾಕಾಗಿದೆ ಎಂದು ದಿ.ಅಹ್ಮದ್ ಪಟೇಲ್ ಪುತ್ರ ಫೈಸಲ್ ಪಟೇಲ್ ತಿಳಿಸಿದ್ದಾರೆ.

Advertisement

ಇದನ್ನೂ ಓದಿ:ನಿತ್ಯ ವಾಕಿಂಗ್ ಮಾಡುವ ಮಹಿಳೆಯರ ಫೋಟೋ, ವಿಡಿಯೋ ಮೊಬೈಲ್‌ನಲ್ಲಿ ಸೆರೆ: ಆರೋಪಿ ಬಂಧನ

“ ಕಾಂಗ್ರೆಸ್ ಪಕ್ಷದ ವರಿಷ್ಠರು ಯಾವುದೇ ಉತ್ತೇಜನ ನೀಡುತ್ತಿಲ್ಲ ಎಂದು ಪಟೇಲ್ ಆರೋಪಿಸಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಾಗಲೇ ಫೈಸಲ್ ಈ ಅಸಮಾಧಾನ ಹೊರಹಾಕಿರುವುದಾಗಿ” ವರದಿ ಹೇಳಿದೆ.

ಈ ವಿಚಾರದ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಫೈಸಲ್ ನಿರಾಕರಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ನಿಲುವು ತಳೆಯುತ್ತಿಲ್ಲ ಎಂದು ಹೇಳಿದ್ದಾರೆ. ಏತನ್ಮಧ್ಯೆ ಮಂಗಳವಾರ (ಏ.5) ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿರುವ ಪೋಟೊವನ್ನು ಟ್ವೀಟ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Advertisement

ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಫೈಸಲ್ ಪಟೇಲ್ ಅಸಮಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಕೇಜ್ರಿವಾಲ್ ಭೇಟಿಯಾಗಿರುವುದು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಡಿಸೆಂಬರ್ ನಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಫೈಸಲ್ ಆಮ್ ಆದ್ಮಿ ಪಕ್ಷದ ಟಿಕೆಟ್ ನಿಂದ ಸ್ಪರ್ಧಿಸುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.

ಇನ್ನೂ ಚುನಾವಣಾ ರಾಜಕೀಯಕ್ಕೆ ಪದಾರ್ಪಣೆ ಮಾಡದ ಫೈಸಲ್ ಈ ಹಿಂದೆ ತಾನು ಕಾಂಗ್ರೆಸ್ ಸೇರುವುದಾಗಿ ತಿಳಿಸಿದ್ದರು. ಅಲ್ಲದೇ ಏಪ್ರಿಲ್ 1ರಿಂದ ಗುಜರಾತ್ ನ ಭರೂಚ್ ಮತ್ತು ನರ್ಮದಾ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದಾಗಿ ಟ್ವೀಟ್ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next