Advertisement

ತೀರ್ಥಹಳ್ಳಿ: ಹಿಂದೂಪರ ಸಂಘಟನೆಗಳಿಂದ ಬೃಹತ್‌ ಪ್ರತಿಭಟನೆ

03:41 PM Dec 02, 2021 | Vishnudas Patil |

ತೀರ್ಥಹಳ್ಳಿ: ಗೋಕಳ್ಳರನ್ನು ಬೆನ್ನಟ್ಟಿದ ಇಬ್ಬರು ಭಜರಂಗದಳ ಕಾರ್ಯಕರ್ತರನ್ನು ಮಂಗಳವಾರ ಬೆಜ್ಜವಳ್ಳಿ ಸಮೀಪ ಹತ್ಯೆಗೈಯ್ಯಲು ಯತ್ನಿಸಿದ ಘಟನೆ ಖಂಡಿಸಿ ಪಟ್ಟಣದಲ್ಲಿ ಬುಧವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

Advertisement

ಹಿಂದೂಪರ ಸಂಘಟನೆಗಳಾದ ಭಜರಂಗದಳ, ಶ್ರೀರಾಮಸೇನೆ, ವಿಶ್ವಹಿಂದೂ ಪರಿಷತ್‌ ಕಾರ್ಯಕರ್ತರು ಪಟ್ಟಣದಲ್ಲಿನ ಬಿಜೆಪಿ ಕಾರ್ಯಾಲಯ ಪ್ರೇರಣಾದಿಂದ ಪ್ರತಿಭಟನಾ ಮೆರವಣಿಗೆ ಹೊರಟು ತಾಲೂಕು ಕಚೇರಿ ಎದುರು ರಸ್ತೆ ತಡೆ ನಡೆಸಿದರು.

ಈ ಸಂದರ್ಭದಲ್ಲಿ ಆರ್‌ಎಸ್‌ಎಸ್‌ ಪ್ರಮುಖ ಭಾರತೀಪುರ ದಿನೇಶ್‌ ಮಾತನಾಡಿ, ತಾಲೂಕಿನಲ್ಲಿ ನಿರಂತರವಾಗಿ ಗೋಹತ್ಯೆ, ಸಾಗಾಣಿಕೆ ನಡೆಯುತ್ತಿದ್ದರೂ ಇದನ್ನು ತಡೆಯುವಲ್ಲಿ ಪೊಲೀಸ್‌ ಇಲಾಖೆ ಸಂಪೂರ್ಣ ವಿಫಲವಾಗಿದೆ. ಹಿಂದೂ ಪರ ಸಂಘಟನೆಗಳ ತಾಳ್ಮೆ ಪರೀಕ್ಷಿಸಬೇಡಿ. ಇಂತಹ ಹೀನಾಯ ಕೆಲಸ ಮಾಡುತ್ತಿರುವವರ ವಿರುದ್ಧ ಪೊಲೀಸ್‌ ಇಲಾಖೆ ಕಾನೂನು ಕ್ರಮ ಕೈಗೊಳ್ಳಲು ವಿಫಲವಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಪರ ಸಂಘಟನೆ ಮುಖಂಡರರಾದ ಲೋಹಿತಾಶ್ವ, ವಾಸುದೇವ್‌, ಜಿಲ್ಲಾ ಭಜರಂಗದಳದ ರಾಜೇಶ್‌, ತಾಲೂಕು ಬಿಜೆಪಿ ಅಧ್ಯಕ್ಷ ರಾಘವೇಂದ್ರ ನಾಯಕ್‌, ಬಿಜೆಪಿ ಮುಖಂಡರಾದ ಸಂದೇಶ್‌ ಜವಳಿ, ಸಾಲೇಕೊಪ್ಪ ರಾಮಚಂದ್ರ ಮುಂತಾದವರು ಮಾತನಾಡಿ ಪೊಲೀಸ್‌ ಇಲಾಖೆ ವೈಫಲ್ಯ ಖಂಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್‌ ರಕ್ಷಣಾಧಿ ಕಾರಿ ಲಕ್ಷಿ ¾àಪ್ರಸಾದ್‌ ಮಾತನಾಡಿ, ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂ ಧಿಸಿದ್ದೇವೆ. ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಗೋ ಕಳ್ಳರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲಾಗುವುದು. ಇದರಲ್ಲಿ ಪೊಲೀಸರ ಕೈವಾಡವಿರುವುದು ತಿಳಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಮುಖ್ಯ ರಸ್ತೆಯಲ್ಲೇ ಪ್ರತಿಭಟನೆ ನಡೆಸಿ ರಸ್ತೆ ಬಂದ್‌ ಮಾಡಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು

Advertisement

Udayavani is now on Telegram. Click here to join our channel and stay updated with the latest news.

Next