Advertisement

ತೀರ್ಥಹಳ್ಳಿ: ಕೇಸರಿ ಶಾಲು ಧರಿಸಿ ಕಾಲೇಜಿಗೆ ಪ್ರವೇಶಿಸಲು ಅನುಮತಿ ನೀಡದಿದ್ದಕ್ಕೆ ಪ್ರತಿಭಟನೆ

05:32 PM Feb 07, 2022 | Shwetha M |

ತೀರ್ಥಹಳ್ಳಿ: ಕರಾವಳಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾರಕಕ್ಕೇರಿರುವ ಕೇಸರಿ ಶಾಲು, ಹಿಜಾಬ್ ಧರಿಸುವ ಕುರಿತಾದ ಪ್ರಕರಣ ಇದೀಗ ರಾಜ್ಯದ ಗೃಹ ಸಚಿವರಾಗಿರುವ ಅರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿಯ ಬಾಳೆಬೈಲು ಸರ್ಕಾರಿ ಡಿಗ್ರಿ ಕಾಲೇಜಿಗೂ ತಟ್ಟಿದೆ.

Advertisement

ಇಂದು ಬೆಳಗ್ಗೆ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಧರಿಸಿಕೊಂಡು ಬಂದಿದ್ದು, ಶಾಲೆಯ ಆಡಳಿತ ಇದಕ್ಕೆ ಅವಕಾಶ ಕಲ್ಪಿಸಿಲ್ಲ. ಕೂಡಲೇ ವಿದ್ಯಾರ್ಥಿಗಳು ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಮನವಿ ನೀಡಿದ್ದು ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕೂರುತ್ತಿರುವುದರಿಂದ ನಾವು ಕೇಸರಿ ಶಾಲು ಹಾಕಿ ಕೂರುತ್ತೇವೆ. ಇದಕ್ಕೆ ಅವಕಾಶ ಕಲ್ಪಿಸದೆ ನೀವು ನಮ್ಮನ್ನ ತಡೆಯುವುದು ನಾವು ಒಪ್ಪುವುದಿಲ್ಲ. ಸಮವಸ್ತ್ರ ಕಡ್ಡಾಯ ಮಾಡಿದರೆ ನಾವು ಒಪ್ಪುತ್ತೇವೆ. ಯಾವುದೇ ಕಾರಣಕ್ಕೂ ಹಿಜಾಬ್ ಧರಿಸಿ ಕೂರಲು ಅವಕಾಶ ಕಲ್ಪಿಸಿಕೊಡಬಾರದು ಎಂದು ಮನವಿ ಮಾಡಿದ್ದಾರೆ.

ಕೊರೋನಾ ಸಾಂಕ್ರಾಮಿಕ ರೋಗ ಹಾಗೂ ಲಾಕ್ ಡೌನ್ ಹೇರಿಕೆಯಿಂದ ರಾಜ್ಯದಲ್ಲಿ ಶೈಕ್ಷಣಿಕ ಪ್ರಗತಿ ಕುಂಠಿತವಾಗಿದ್ದು ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಶಾಲಾ ಕಾಲೇಜುಗಳಲ್ಲಿ ಈ ರೀತಿ ಧರ್ಮಗಳ ನಡುವಿನ ಸಂಘರ್ಷ ನಿಜಕ್ಕೂ ವಿದ್ಯಾರ್ಥಿಗಳ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ತೊಂದರೆಯಾಗುವ ಸಾಧ್ಯತೆಗಳಿದ್ದು ಈ ಬಗ್ಗೆ ಸರ್ಕಾರ ಹಾಗೂ ವಿವಿಧ ಧಾರ್ಮಿಕ ಮುಖಂಡರುಗಳು ಊರಿನ ನಾಗರಿಕರು ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ತಕ್ಷಣ ಈ ಸಂಘರ್ಷವನ್ನು ಮುಕ್ತಾಯಗೊಳಿಸುವ ಜವಾಬ್ದಾರಿ ಇದೆ ಎನ್ನುವ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next