Advertisement

ಜನ ಗುಂಪು ಸೇರುವುದು ನಿಲ್ಲಿಸಲಿ: ಡಾ|ಮಹಾದೇವ

05:05 PM Mar 22, 2020 | Naveen |

ಬೀದರ: ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರದಂತೆ ತಿಳಿಸಿ ಆದೇಶಿಸಿದ್ದರೂ ಜನರು ಅಲ್ಲಲ್ಲಿ ಸೇರುವುದು ಕಾಣುತ್ತಿದೆ. ಇದನ್ನು ತಡೆಯಬೇಕು. ಒಬ್ಬರಿಂದ ಮತ್ತೂಬ್ಬರಿಗೆ ಸೋಂಕು ತೀವ್ರ ಹರಡುವುದನ್ನು ತಡೆಯಲು ಜನರು ಒಂದೆಡೆ ಸೇರುವುದನ್ನು ನಿಲ್ಲಿಸಲೇಬೇಕಿದೆ ಎಂದು ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಅವರು ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು.

Advertisement

ನಗರದಲ್ಲಿ ಶನಿವಾರ ಸಂಜೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಸಭೆ ಮತ್ತು ಇನ್ನಿತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಆದ್ದರಿಂದ ಕಿರಾಣಿ, ತರಕಾರಿ ಮತ್ತು ಔಷ ಧ ಅಂಗಡಿಗಳನ್ನು ಹೊರತುಪಡಿಸಿ ಜಿಲ್ಲಾದ್ಯಂತ ಎಲ್ಲ ಅಂಗಡಿಗಳನ್ನು ಮುಚ್ಚಲು ಸರಿಯಾಗಿ ಕ್ರಮ ವಹಿಸಬೇಕು ಎಂದರು.

ಸೋಂಕು ಇತರರಿಗೆ ಹರಡದಂತೆ ಮುಂಜಾಗ್ರತೆ ವಹಿಸಬೇಕಾದ ಹಿನ್ನೆಲೆಯಲ್ಲಿ ವಿದೇಶ ಮತ್ತು ಹೊರ ರಾಜ್ಯಗಳಿಂದ ಬಂದು ಗೃಹ ನಿರ್ಬಂಧ (ಹೋಮ್‌ ಕ್ವಾರಂಟೈನ್‌)ದಲ್ಲಿರುವವರ ಮೇಲೆ ಸರಿಯಾಗಿ ನಿಗಾ ವಹಿಸಬೇಕು. ಅಂತಹ ಮನೆಗಳ ಸದ್ಯದ ಪರಿಸ್ಥಿತಿ ಹೇಗಿದೆ ಎಂಬುದನ್ನು ಗಮನಿಸಿ ಅವರಿಗೆ ಅನುಕೂಲ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹೋಮ್‌ ಕ್ವಾರಂಟೈನಲ್ಲಿರುವವರು ಕಣ್ತಪ್ಪಿಸಿ ಹೊರಗೆ ಹೋಗುವುದು ಹಾಗೂ ಸಾರ್ವಜನಿಕರ ಸ್ಥಳಗಳಲ್ಲಿ ಓಡಾಡದಂತೆ ನೋಡಿಕೊಳ್ಳಬೇಕು. ಗೃಹ ನಿರ್ಬಂಧವು ಶಿಕ್ಷೆಯಲ್ಲ ಎಂಬುದನ್ನು ಮನವರಿಕೆ ಮಾಡಿ, ಅವರಿಗೆ ತಿಳಿ ಹೇಳಬೇಕು ಎಂದರು.

ಅನಧಿಕೃತ ಮಾರಾಟ ಬೇಡ: ಪ್ರಧಾನ ಮಂತ್ರಿಗಳು ಮಾ. 22ರಂದು ಜನತಾ ಕರ್ಫ್ಯೂಗೆ ಮನವಿ ಮಾಡಿದ್ದು, ಇದು ಸರಿಯಾದ ರೀತಿಯಲ್ಲಿ ಪಾಲನೆಯಾದಲ್ಲಿ ಪರಿಸ್ಥಿತಿ ಹತೋಟಿಗೆ ಬರಲಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಅನಧಿಕೃತವಾಗಿ ಮಾಸ್ಕ್ ಮತ್ತು ಸ್ಯಾನಿಟೈಜರ್‌ಗಳ ಮಾರಾಟ ಕಂಡುಬಂದಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಮಾಸ್ಕ್ ಸರಿಯಾಗಿ ಬಳಸಿ: ಬಹುತೇಕ ಜನರು ಮಾಸ್ಕ್ಗಳನ್ನು ಬಳಸುತ್ತಿರುವುದು ಉತ್ತಮ ಬೆಳವಣಿಗೆ. ಆದರೆ, ಮಾಸ್ಕ್ಗಳನ್ನು ಹೇಗೆ ಬಳಸಬೇಕು ಎಂದು ತಿಳಿದು ಆ ರೀತಿ ಬಳಸಬೇಕು. ಸೋಂಕಿತರಿಂದ ನಮಗೆ ವೈರಸ್‌ ಹರಡದಂತೆ ಇಲ್ಲವೇ ನಮ್ಮಿಂದ ಇತರರಿಗೆ ಸೋಂಕು ಹರಡದ ಹಾಗೆ ಮಾಸ್ಕ್ಗಳನ್ನು ಬಳಸಬೇಕು. ಇದಕ್ಕಾಗಿ ವೈದ್ಯರ ಸಲಹೆಯಂತೆ ಮಾಸ್ಕ್ಗಳನ್ನು ಬಳಸಬೇಕು ಎಂದು ಜಿಲ್ಲಾ ಧಿಕಾರಿಗಳು ಸಾರ್ವಜನಿಕರಿಗೆ ತಿಳಿಸಿದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್‌., ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತ ಅಕ್ಷಯ್‌ ಶ್ರೀಧರ್‌, ಪೌರಾಯುಕ್ತ ಬಿ. ಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ| ವಿ.ಜಿ.ರೆಡ್ಡಿ, ವೈದ್ಯಾಧಿಕಾರಿಗಳಾದ ಡಾ|ರತಿಕಾಂತ ಸ್ವಾಮಿ, ಡಾ|ವಿಜಯಕುಮಾರ ಅಂತಪ್ಪನವರ, ಡಾ| ಅನೀಲ ಚಿಂತಾಮಣಿ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next