Advertisement

ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್‌ ಕಡ್ಡಾಯ : ಪ್ರತಿ ಟಿಕೆಟ್‌ಗೆ 300 ರೂ. ನಿಗದಿ

07:30 PM Jun 22, 2021 | Team Udayavani |

ತಿರುಪತಿ: ತಿರುಮಲದ ಶ್ರೀ ವೆಂಕಟೇಶ್ವರ ಸನ್ನಿಧಾನಕ್ಕೆ ಭೇಟಿ ಕೊಡುವ ಭಕ್ತರಿಗೆ, ದೇವಸ್ಥಾನದ ಆಡಳಿತ ಮಂಡಳಿ (ಟಿಟಿಡಿ), ಜುಲೈ 1ರಿಂದ ಟಿಕೆಟ್‌ ಆಧಾರಿತ ಪ್ರತ್ಯೇಕ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದೆ. ಆನ್‌ಲೈನ್‌ನಲ್ಲೂ ಈ ಟಿಕೆಟ್‌ಗಳನ್ನು ಖರೀದಿಸಬಹುದಾಗಿದ್ದು, ಜುಲೈ ತಿಂಗಳ ಟಿಕೆಟ್‌ಗಳು ಜೂ. 23ರಿಂದ ಬೆಳಗ್ಗೆ 9 ಗಂಟೆಯಿಂದ ಟಿಟಿಡಿ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿವೆ ಎಂದು ಮೂಲಗಳು ತಿಳಿಸಿವೆ.

Advertisement

ಸದ್ಯಕ್ಕೆ ಜುಲೈ ತಿಂಗಳಿಗೆ ಮಾತ್ರ ಟಿಕೆಟ್‌ ನೀಡಲಾಗುತ್ತದೆ. ಪ್ರತಿ ಟಿಕೆಟ್‌ಗೆ 300 ರೂ. ಇರಲಿದ್ದು, ದಿನಕ್ಕೆ 5 ಸಾವಿರ ಜನರಿಗೆ ಮಾತ್ರ ಟಿಕೆಟ್‌ ಆಧಾರಿತ ದರುಶನಕ್ಕೆ ಅವಕಾಶವಿರುತ್ತದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ (ಟಿಟಿಡಿ) ತಿಳಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ದೇಗುಲದಲ್ಲಿ ಹೆಚ್ಚಿನ ಜನಸಂಖ್ಯೆಯನ್ನು ನಿಯಂತ್ರಿಸುವ ಉದ್ದೇಶದಿಂದ ಈ ಕ್ರಮ ಜಾರಿಗೊಳಿಸಲಾಗುತ್ತಿದ್ದು, ಟಿಕೆಟ್‌ ಇದ್ದವರಿಗೆ ಮಾತ್ರ ಶ್ರೀ ವೆಂಕಟೇಶ್ವರ ಸನ್ನಿಧಾನವಿರುವ ತಿರುಮಲ ಪ್ರವೇಶಕ್ಕೆ ಅವಕಾಶ ಸಿಗುತ್ತದೆ.

ಇದನ್ನೂ ಓದಿ : ಪ್ರಾಣಿ ಕಲ್ಯಾಣ ಸಹಾಯವಾಣಿ ನಾಳೆ(ಜೂನ್ 23) ಲೋಕಾರ್ಪಣೆ : ಸಚಿವ ಪ್ರಭು ಚವ್ಹಾಣ್

Advertisement

Udayavani is now on Telegram. Click here to join our channel and stay updated with the latest news.

Next