ಆಂಧ್ರಪ್ರದೇಶ: ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿರುವ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆಯೊಂದು ಬಂದಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭದ್ರತೆಯನ್ನು ಹೆಚ್ಚಿಸಲಾಗಿದೆ.ಅಲ್ಲದೆ
ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಇಸ್ಕಾನ್ ದೇವಸ್ಥಾನಕ್ಕೆ ಭಾನುವಾರ (ಅ.27) ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭದ್ರತೆಯನ್ನು ಹೆಚ್ಚಿಸಲಾಗಿದೆ. ‘ಪಾಕಿಸ್ತಾನದ ಐಎಸ್‌ಐ ಸಂಘಟನೆಯ ಉಗ್ರರು ದೇವಾಲಯವನ್ನು ಸ್ಫೋಟಿಸಲಿದ್ದಾರೆ’ ಎಂದು ಹೇಳುವ ಇಮೇಲ್ ಒಂದು ದೇವಸ್ಥಾನದ ಸಿಬ್ಬಂದಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಬ್ ಬೆದರಿಕೆ ಬಂದಿರುವ ಮಾಹಿತಿ ಸಿಕ್ಕಿದ ಕೂಡಲೇ ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ಮತ್ತು ಶ್ವಾನ ದಳದ ತಂಡಗಳು ದೇವಸ್ಥಾನಕ್ಕೆ ಆಗಮಿಸಿ ದೇವಾಲಯದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಆದರೆ, ದೇವಸ್ಥಾನದ ಆವರಣದಲ್ಲಿ ಯಾವುದೇ ಸ್ಫೋಟಕ ಸೇರಿದಂತೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎನ್ನಲಾಗಿದೆ.
ಅಕ್ಟೋಬರ್ 26 ರಂದು, ತಿರುಪತಿಯ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆಗಳು ಬಂದಿದ್ದವು, ತಪಾಸಣೆ ನಡೆಸಿದ ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ