Advertisement
ಕಠಿಣ ಕ್ರಮಕ್ಕೆ ಒತ್ತಾಯತಿರುಪತಿಯ ಲಡ್ಡು ಪ್ರಸಾದಕ್ಕೆ ಬಳಸಲಾದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಅಯೋಧ್ಯೆ ದೇವಾಲಯದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ‘ಪ್ರಸಾದ’ದಲ್ಲಿ ಪ್ರಾಣಿಗಳ ಕೊಬ್ಬು ಬೆರೆಸಿದ್ದರೆ ಅದು ಅಕ್ಷಮ್ಯ. ಇದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಕರಣದ ಕುರಿತು ತನಿಖಾ ಸಂಸ್ಥೆಯಿಂದ ತನಿಖೆಯಾಗಲಿ ಎಂದು ಸತ್ಯೇಂದ್ರ ದಾಸ್ ಒತ್ತಾಯಿಸಿದ್ದಾರೆ.
ವೈಷ್ಣವ ಸಂತರು ಮತ್ತು ಭಕ್ತರು ಬೆಳ್ಳುಳ್ಳಿ, ಈರುಳ್ಳಿಯೂ ಬಳಸುವುದಿಲ್ಲ. ಇಂತಹ ಸಂದರ್ಭದಲ್ಲಿ ಲಡ್ಡು ಪ್ರಸಾದದಲ್ಲಿ ಕೊಬ್ಬು ಬಳಸಿರುವುದು ಅತ್ಯಂತ ದುರದೃಷ್ಟಕರ. ಇದು ಹಿಂದೂ ನಂಬಿಕೆಯ ಅಪಹಾಸ್ಯ. ಪ್ರಮುಖ ಏಜೆನ್ಸಿಗಳು ಇದನ್ನು ತನಿಖೆ ಮಾಡಬೇಕು ಮತ್ತು ತಪ್ಪಿತಸ್ಥರು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ದಾಸ್ ಹೇಳಿದ್ದಾರೆ. ಗುಣಮಟ್ಟದ ಪ್ರಸಾದ ವಿತರಿಸಲಿ:
ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾತನಾಡಿ ” ತಿರುಪತಿ ಲಡ್ಡು ಪ್ರಸಾದದ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರದ ತನಿಖಾ ವರದಿಗಾಗಿ ಕಾಯುತ್ತಿದ್ದೇವೆ. ರಾಮ ಜನ್ಮಭೂಮಿಯಲ್ಲಿ ಪ್ರಾಣ ಪ್ರತಿಷ್ಠೆ ಸಂದರ್ಭದಲ್ಲಿ ಭಕ್ತರಿಗೆ ಏಲಕ್ಕಿ ಬೀಜಗಳ ಮಾತ್ರವೇ ವಿತರಿಸಲಾಗಿದೆ. ನಾನು ನನ್ನ ಜೀವನದಲ್ಲಿ 1981ರಲ್ಲಿ ಒಮ್ಮೆ ಮಾತ್ರ ತಿರುಪತಿಗೆ ತೆರಳಿದ್ದೇನೆ. ಅಯೋಧ್ಯೆಯ ಪ್ರಮುಖ ದೇವಸ್ಥಾನ ಹನುಮಾನ್ ಗಡಿಯ ಪ್ರಸಾದದಲ್ಲಿ ದೇಸಿ ಗೋವಿನ ತುಪ್ಪ ಮಾತ್ರ ಬಳಸಲಾಗುತ್ತಿದೆ ಎಂದರು. ತಿರುಪತಿ ಪ್ರಸಾದ ವಿವಾದದಿಂದ ದೇಶಾದ್ಯಂತ ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರಿಗೆ ವಿತರಿಸುವ ದೇವರ ಪ್ರಸಾದದ ಗುಣಮಟ್ಟ ಪರೀಕ್ಷಿಸಿ ವಿತರಿಸಬೇಕು ಎಂದು ಒತ್ತಾಯಿಸಿದರು.
Related Articles
ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ನಂತರ ತಿರುಪತಿ ದೇವಸ್ಥಾನದ ‘ಪ್ರಸಾದ’ (ಲಡ್ಡುಗಳು) ಭಾರೀ ವಿವಾದದ ಕೇಂದ್ರಬಿಂದುವಾಗಿದೆ. 2019 ಮತ್ತು 2024ರ ನಡುವೆ ಆಂಧ್ರದ ಮಾಜಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡಿದಾಗ ಪ್ರಧಾನಿ ನರೇಂದ್ರ ಮೋದಿಗೆ ದೇವಸ್ಥಾನದ ಲಡ್ಡುಗಳ ಉಡುಗೊರೆಯಾಗಿ ನೀಡಿದ್ದರು ಎಂದು ವರದಿ ತಿಳಿಸಿದೆ.
Advertisement
ಹಿಂದಿನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಲಡ್ಡುಗಳಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬು ಬಳಸಲು ಅನುಮತಿ ನೀಡಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ ನಂತರ ವಿವಾದ ಉಂಟಾಗಿದೆ. ಗುಜರಾತಿನ ಪ್ರಯೋಗಾಲಯದ ವರದಿ ಉಲ್ಲೇಖಿಸಿ, ನಾಯ್ಡು ಅವರ ಪಕ್ಷವು ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಕಂಡು ಬಂದಿದೆ ಎಂದು ಆರೋಪಿಸಿದೆ.