Advertisement

ಪಶ್ಚಿಮಬಂಗಾಳದಲ್ಲಿ ಟಿಎಂಸಿ, BJP ತೀವ್ರ ಸ್ಪರ್ಧೆ, ಎಡಪಕ್ಷ, ಕಾಂಗ್ರೆಸ್ ಮೈತ್ರಿಗೆ ಮುಖಭಂಗ!

09:59 AM May 02, 2021 | Team Udayavani |

ಚೆನ್ನೈ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತಎಣಿಕೆ ಮುಂದುವರಿದಿದ್ದು, ಪಶ್ಚಿಮಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ 115 ಸ್ಥಾನಗಳಲ್ಲಿ, ಭಾರತೀಯ ಜನತಾ ಪಕ್ಷ 106 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಇದೇ ಮೊದಲ ಬಾರಿಗೆ ಪ್ರಾದೇಶಿಕ ಪಕ್ಷದ ಪ್ರಾಬಲ್ಯ ಹೊಂದಿದ್ದ ಪಶ್ಚಿಮಬಂಗಾಳದಲ್ಲಿ ಬಿಜೆಪಿ ತೀವ್ರ ಪೈಪೋಟಿ ನೀಡಿದೆ.

Advertisement

ಇದನ್ನೂ ಓದಿ:ಹೊಸ ಇತಿಹಾಸ…ಕೇರಳದಲ್ಲಿ ಈ ಬಾರಿಯೂ ಎಲ್ ಡಿಎಫ್ ಗೆ ಅಧಿಕಾರದ ಗದ್ದುಗೆ?

ಸತತ ಮೂರು ದಶಕಗಳ ಕಾಲ ಅಧಿಕಾರ ನಡೆಸಿದ್ದ ಎಡಪಕ್ಷ 2021ರ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣವಾಗಿ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್ ಮೈತ್ರಿಕೂಟ ಕೂಡಾ ಯಾವುದೇ ಮ್ಯಾಜಿಕ್ ನಡೆಸಲು ಸಾಧ್ಯವಾಗಿಲ್ಲ.

294 ಸದಸ್ಯ ಬಲದ ಪಶ್ಚಿಮಬಂಗಾಳ ವಿಧಾನಸಭೆಯಲ್ಲಿ ಅಧಿಕಾರದ ಗದ್ದುಗೆ ಏರಲು 148 ಸ್ಥಾನಗಳ ಅಗತ್ಯವಿದೆ. ಆದರೆ ಸದ್ಯದ ಟ್ರೆಂಡ್ ಪ್ರಕಾರ ಟಿಎಂಸಿ ಮತ್ತು ಬಿಜೆಪಿ ನಡುವೆ ನೇರಾನೇರ ಪೈಪೋಟಿ ಮುಂದುವರಿದಿದೆ. ಎಡಪಕ್ಷಗಳ ಮೈತ್ರಿಕೂಟ ಕೇವಲ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

2016ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ 211 ಸ್ಥಾನಗಳಲ್ಲಿ, ಕಾಂಗ್ರೆಸ್ 44 ಸ್ಥಾನಗಳಲ್ಲಿ, ಎಡಪಕ್ಷ ಮೈತ್ರಿಕೂಟ 26 ಸ್ಥಾನಗಳಲ್ಲಿ ಹಾಗೂ ಭಾರತೀಯ ಜನತಾ ಪಕ್ಷ ಕೇವಲ 3 ಸ್ಥಾನಗಳಲ್ಲಿ ಜಯ ಸಾಧಿಸಿತ್ತು.

Advertisement

2021ರ ಜಿದ್ದಾಜಿದ್ದಿನ ಚುನಾವಣೆಯಾಗಿರುವ ಪಶ್ಚಿಮಬಂಗಾಳದಲ್ಲಿ ಸತತ ಮೂರನೇ ಬಾರಿಗೆ ಮತದಾರರು ದೀದಿ ಕೈಹಿಡಿಯುತ್ತಾರಾ ಅಥವಾ ಭಾರತೀಯ ಜನತಾ ಪಕ್ಷದ ಪಾಲಿಗೆ ಅಧಿಕಾರ ಒಲಿಯುತ್ತದಾ ಇಲ್ಲವೇ ಅತಂತ್ರ ವಿಧಾನಸಭಾ ಫಲಿತಾಂಶ ಹೊರಬೀಳಲಿದೆಯಾ ಎಂಬುದು ಇನ್ನು ಕೆಲವೇ ಗಂಟೆಗಳಲ್ಲಿ ಸ್ಪಷ್ಟವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next