Advertisement

ಟಿಎಂಸಿ ಪಕ್ಷದ ಅಭ್ಯರ್ಥಿ ಕಾಜಲ್ ಸಿನ್ಹಾ ಕೋವಿಡ್ ಗೆ ಬಲಿ

02:38 PM Apr 25, 2021 | Team Udayavani |

ಪಶ್ಚಿಮಬಂಗಾಳ :  ದೇಶದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಗುಲಿದ್ದ ಖಾರ್ದಾ ವಿಧಾನಸಭಾ ಕ್ಷೇತ್ರದ ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ ಭಾನುವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.  ಕಾಜಲ್ ಸಿನ್ಹಾ (59)ಗೆ ಕಳೆದ ಎರಡು ದಿನಗಳ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರು ಬೆಲಿಯಾಘಾಟಾ ಐಡಿ ಆಸ್ಪತ್ರೆಗೆ ದಾಖಲಾಗಿದ್ದರು.

Advertisement

ಇನ್ನು ಸಿನ್ಹಾ ಅವರ ಸಾವಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಕಂಬನಿ ಮಿಡಿದಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಅವರು, ಸಿನ್ಹಾ ಅವರ ಸಾವಿನ ಸುದ್ದಿಯಿಂದ ತುಂಬಾ ದುಃಖ ಮತ್ತು ಆಘಾತಕ್ಕೊಳಗಾಗಿದ್ದೇನೆ. ಖಾರ್ದಾಹಾದ ನಮ್ಮ ಅಭ್ಯರ್ಥಿ ಕಾಜಲ್ ಸಿನ್ಹಾ ಕೋವಿಡ್‌ ಸೋಂಕಿಗೆ ಸಾವಿಗೀಡಾಗಿದ್ದಾರೆ. ಅವರು ತಮ್ಮ ಜೀವನವನ್ನು ಜನರ ಸೇವೆ ಸಲ್ಲಿಸಲು ಅರ್ಪಿಸಿದರು ಮತ್ತು ದಣಿವರಿಯದ ಪ್ರಚಾರವನ್ನು ನಡೆಸಿದರು. ಅವರು ತೃಣಮೂಲ ಕಾಂಗ್ರೆಸ್‌ಗೆ ದೀರ್ಘಕಾಲ ಸೇವೆ ಸಲ್ಲಿಸಿದ ಸದಸ್ಯರಾಗಿದ್ದರು. ನಾವು ಅವರನ್ನು ಕಳೆದುಕೊಂಡಿದ್ದೇವೆ. ಅವರ ಕುಟುಂಬ ಮತ್ತು ಅವರ ಅಭಿಮಾನಿಗಳಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ ಎಂದು ಬರೆದಿದ್ದಾರೆ.

ಇದೇ ತಿಂಗಳ ಏಪ್ರಿಲ್ 22ರಂದು ಖಾರ್ದಾ ಮತ ಕ್ಷೇತ್ರದಲ್ಲಿ ಮತದಾನ ನಡೆಯಿತು. ಇದೇ ತಿಂಗಳ ಆರಂಭದಲ್ಲಿ ಜಂಗೀಪುರ ಸ್ಥಾನದಿಂದ ಕ್ರಾಂತಿಕಾರಿ ಸಮಾಜವಾದಿ ಪಕ್ಷದ (ಆರ್‌ಎಸ್‌ಪಿ) ಅಭ್ಯರ್ಥಿ ಪ್ರದೀಪ್ ಕುಮಾರ್ ನಂದಿ ಮತ್ತು ಸಂಸರ್‌ಗಂಜ್ ಕ್ಷೇತ್ರದ ಕಾಂಗ್ರೆಸ್ ನಾಮನಿರ್ದೇಶಿತ ರೆಜೌಲ್ ಹಾಕ್ ಕೋವಿಡ್‌ನಿಂದಾಗಿ ಸಾವಿಗೀಡಾಗಿದ್ದರು. ಇದೀಗ ಸಿನ್ಹಾ ಅವರ ಸಾವು ಟಿಎಂಸಿ ಪಕ್ಷಕ್ಕೆ ನೋವು ತರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next