ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ಬುಧವಾರ ವರದಿ ಮಾಡಿದೆ.
ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಸುಮಾರು 1.07 ಕೋಟಿ ರೂಪಾಯಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಅಹಮದಾಬಾದ್‌ನಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದ್ದು ಸದ್ಯ ಗುಜರಾತ್ ಪೊಲೀಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇದರೊಂದಿಗೆ ಗೋಖಲೆ ಅವರನ್ನು ಗುಜರಾತ್ ಪೊಲೀಸರು ಒಂದೇ ತಿಂಗಳಲ್ಲಿ ಮೂರನೇ ಬಾರಿ ಬಂಧಿಸಿದಂತಾಗಿದೆ.
ಇದನ್ನೂ ಓದಿ: ಚುನಾವಣೆಯಲ್ಲಿ ಸಕ್ರಿಯ ಭಾಗವಹಿಸುವಿಕೆ ಇನ್ನಷ್ಟು ಬಲಪಡಿಸಿ: ಪ್ರಧಾನಿ ಮೋದಿ