ಕೋಲ್ಕತ್ತಾ: 2024ರ ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಬೇರೆ ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಹೋಗುವುದಿಲ್ಲ ಮತ್ತು ಜನರ ಬೆಂಬಲದೊಂದಿಗೆ ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಹೇಳಿದರು.
“2024 ರಲ್ಲಿ ನಾವು ತೃಣಮೂಲ ಮತ್ತು ಜನರ ನಡುವೆ ಮೈತ್ರಿಯನ್ನು ಮಾಡುತ್ತೇವೆ. ನಾವು ಬೇರೆ ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಹೋಗುವುದಿಲ್ಲ. ಜನರ ಬೆಂಬಲದೊಂದಿಗೆ ಏಕಾಂಗಿಯಾಗಿ ಹೋರಾಟ ಮಾಡುತ್ತೇವೆ. ಬಿಜೆಪಿಯನ್ನು ಸೋಲಿಸಲು ಬಯಸುವವರು ನಮಗೆ ಮತ ಹಾಕುತ್ತಾರೆ ಎಂದು ನಾನು ನಂಬುತ್ತೇನೆ” ಎಂದು ಮಮತಾ ಹೇಳಿದ್ದಾರೆ.
ಗುರುವಾರ ಸಾಗರ್ದಿಘಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಮತ್ತು ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವನ್ನು ಉಲ್ಲೇಖಿಸಿದ ಮಮತಾ ಬ್ಯಾನರ್ಜಿ, ಸಿಪಿಐ(ಎಂ) ಅಥವಾ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವವರು ಬಿಜೆಪಿಗೆ ಮತ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ:Bidar Rally ಮೋದಿ ಮ್ಯಾಜಿಕ್ ಈಶಾನ್ಯ ಮಾತ್ರವಲ್ಲ ಕರ್ನಾಟಕದಲ್ಲೂ ಕೆಲಸ ಮಾಡುತ್ತದೆ: ಶಾ
Related Articles
ಸಾಗರ್ದಿಘಿ ಉಪಚುನಾವಣೆಯಲ್ಲಿ ಟಿಎಂಸಿ ವಿಜಯದ ನಂತರ ಟಿಎಂಸಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಕೆಸರೆರಚಾಟ ಉಂಟಾಯಿತು, ಎರಡೂ ಪಕ್ಷಗಳು ಬಿಜೆಪಿಯ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಪರಸ್ಪರ ಆರೋಪಿಸಿದರು.