Advertisement

ದೇಶದ ಬೇರೆ ರಾಜ್ಯಗಳಲ್ಲಿಯೂ ತಮಿಳು ಭಾಷೆ ಕಲಿಯಬೇಕು: ಪ್ರಧಾನಿಗೆ ಪಳನಿಸ್ವಾಮಿ

09:40 AM Jun 06, 2019 | Nagendra Trasi |

ಚೆನ್ನೈ:ದಕ್ಷಿಣ ಭಾರತದ ರಾಜ್ಯಗಳ ಒತ್ತಡಕ್ಕೆ ಮಣಿದಿದ್ದ ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರದಡಿ ಹಿಂದಿ ಕಡ್ಡಾಯ ಎಂಬ ಅಂಶಕ್ಕೆ ಕತ್ತರಿ ಹಾಕಿದ ಬೆನ್ನಲ್ಲೇ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ತಮಿಳು ಭಾಷೆ ಕಲಿಕೆಯ ಆಯ್ಕೆಗೆ ಅವಕಾಶ ಮಾಡಿಕೊಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಒತ್ತಾಯಿಸಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಪಳನಿಸ್ವಾನಿ, ತಮಿಳುನಾಡನ್ನು ಹೊರತುಪಡಿಸಿ ಇತರ ರಾಜ್ಯಗಳ ಪಠ್ಯದ ಆಯ್ಕೆಯಲ್ಲಿ ತಮಿಳು ಭಾಷೆಗೆ ಆದ್ಯತೆ ಕೊಡಬೇಕು ಎಂದು ತಿಳಿಸಿದ್ದಾರೆ.

ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಜೀಯವರೇ ನಿಮ್ಮನ್ನು ಸೇರಿದಂತೆ ಇತರ ರಾಜ್ಯಗಳಲ್ಲಿಯೂ ತಮಿಳು ಭಾಷೆ ಕಲಿಕೆಯ ಆಯ್ಕೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಇದರಿಂದಾಗಿ ಜಗತ್ತಿನ ಅತ್ಯಂತ ಪ್ರಾಚೀನ ಭಾಷೆಯ ಕಲಿಕೆಗೆ ಅವಕಾಶ ಮಾಡಿಕೊಟ್ಟರೆ ಇದೊಂದು ದೊಡ್ಡ ಸೇವೆಯಾಗಲಿದೆ ಎಂದು ಪಳನಿಸ್ವಾಮಿ ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next